ಚಳ್ಳಕೆರೆ ನ್ಯೂಸ್ :
ನೀಟ್ ಪರೀಕ್ಷೆಯಿಂದ ಅನ್ಯಾಯಕ್ಕೊಳಗಾದ
ಮಕ್ಕಳಿಗೆ ನ್ಯಾಯ ಕೊಡಿಸಿ
ನೀಟ್ ಪರೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದ್ದು,
ರಾಜ್ಯ ಸರ್ಕಾರ ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕು,
ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕೆಂದು
ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿಇ ಜಗದೀಶ್ ಒತ್ತಾಯಿಸಿದರು.
ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು.
ರಾಜ್ಯ ಸರ್ಕಾರ ನೀಟ್ ಪರೀಕ್ಷೆಯನ್ನು ರದ್ದು ಮಾಡಿ ಮೊದಲಿನಂತೆ
ಸಿಇಟಿ ಮಾತ್ರ ನಡೆಸಬೇಕೆಂದು ಆಗ್ರಹಿಸಿದರು.