10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ
ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ
ಚಿತ್ರದುರ್ಗ :
ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ ಬದುಕಿನಲ್ಲಿ ಯುವ ಜನರಿಗೆ ಮಾನಸಿಕ ಶಕ್ತಿ ಅವಶ್ಯಕವಾಗಿದೆ. ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸಲು ಮಾನಸಿಕವಾಗಿ ಸದೃಢರಾಗಿರಲು ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿಯಾಗಿದೆ ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಯುವಜನರು ಒತ್ತಡದಿಂದ ಹೃದಯಾಘಾತಕ್ಕೆ ಒಳಗಾಗುವುದು. ಜೀವನದ ಕಠಿಣ ಸಮಯ ಎದುರಿಸಲಾಗದೆ ಆತ್ಮಹತ್ಯೆ ಅಂತಹ ಕೃತ್ಯಗಳಿಗೆ ಮುಂದಾಗುವುದನ್ನು ದಿನ ನಿತ್ಯ ಕಾಣುತ್ತಿದ್ದೇವೆ. ಬಹಳಷ್ಟು ಯುವ ಜನರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಯೋಗದಿಂದ ಈ ಇವೆಲ್ಲವೂಗಳಿಗೂ ಪರಿಹಾರ ದೊರಕಲಿದೆ ಎಂದರು.
ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು. ವೈದ್ಯಾಧಿಕಾರಿ ಗಿರೀಶ್ ಸ್ವಾಗತಿಸಿದರು. ವೈದ್ಯಾಧಿಕಾರಿ ಪ್ರಶಾಂತ್ ವಂದಿಸಿದರು.
ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಜೆ.ಕುಮಾರಸ್ವಾಮಿ, ಲಕ್ಷ್ಮೀನಾರಾಯಣ, ನಗರ ಸಭೆ ಆಯುಕ್ತೆ ಎಂ.ರೇಣುಕಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ವಿವಿಧ ಇಲಾಕೆ ಅಧಿಕಾರಿಗಳು, ಜಿಲ್ಲೆಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು, ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು, ಸದಸ್ಯರು ಪಾಲ್ಗೊಂಡಿದ್ದರು.