ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಹಿರಿಯೂರು ನಗರದ ನಗರಸಭೆ ಕಾರ್ಯಾಲಯದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ನಿರ್ಮಾಣದಲ್ಲಿನ ಸಮಸ್ಯೆಗಳ ಬಗ್ಗೆ ನಡೆದ ಚರ್ಚೆಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಹಿರಿಯೂರು ನಗರದ ನಗರಸಭೆ ಕಾರ್ಯಾಲಯದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ ರವರ ಅಧ್ಯಕ್ಷತೆಯಲ್ಲಿ ನಡೆದ ಚಳ್ಳಕೆರೆ – ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ – 150ಎ ರಸ್ತೆ ನಿರ್ಮಾಣದಲ್ಲಿನ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್, ಅರಣ್ಯ ಅಧಿಕಾರಿಗಳು, ಕೃಷಿ ಅಧಿಕಾರಿಗಳು, ಯೋಜನಾ ನಿರ್ದೇಶಕರು, ಭೂ ಸ್ವಾಧೀನ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.