ಚಳ್ಳಕೆರೆ ನ್ಯೂಸ್ :

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ‌ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಎಂ.ಎಸ್.ಎಂ.ಈ. ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ಸಣ್ಣ ಕೈಗಾರಿಕೆಗಳ ಮತ್ತು ಸಾರ್ವಜನಿಕ ಉದ್ಯಮಿಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ರವರ ಅಧ್ಯಕ್ಷತೆಯಲ್ಲಿ ನಡೆದ ಅಂತಾರಾಷ್ಟ್ರೀಯ ಎಂ.ಎಸ್.ಎಂ.ಈ. ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಮತ್ತು ಉದ್ಯಮಿಗಳು ಉಪಸ್ಥಿತರಿದ್ದರು.

ನಂತರ ನೂತನವಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಎಸ್.ಮಂಜುನಾಥ್ ರವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭ ಕೋರಿದರು.

ಈ ಸಂದರ್ಭದಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಆಹಾರ ನಿಗಮದ ಅಧ್ಯಕ್ಷರಾದ ಬಿ.ಜಿ.ಗೋವಿಂದಪ್ಪ ರವರು, ಮಾಜಿ ಸಚಿವರಾದ ಆಂಜನೇಯ ರವರು, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ ರವರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಂ ಕೆ ತಾಜ್ ಪೀರ್ ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಜಿಲ್ಲಾ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Namma Challakere Local News
error: Content is protected !!