ಚಳ್ಳಕೆರೆ : ಪ್ರಕೃತಿ ವಿಕೋಪದಡಿಯಲ್ಲಿ ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕಟ್ಟಡಗಳು ಮಳೆಗೆ ಹಾನಿಯಾಗಿ ಬಿದ್ದಿದ್ದರೆ ಅಂದೇ ವರದಿ ಮಾಡಿ ಸರಕಾರಕ್ಕೆ ರವಾನಿಸಿ ಪರಿಹಾರದ ಅನುದಾನಕ್ಕೆ ಬೇಡಿಕೆ ಸಲ್ಲಿಸಬೇಕು ಎಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರ ಮಂಜುನಾಥ್ ಹೇಳಿದರು.
ಅವರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾನ್ಯ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು, ಗ್ರಾಮೀಣ ಪ್ರದೇಶದಲ್ಲಿ ಗುಳೆ ಹೊಗುವ ಜನರಿಗೆ ನರೇಗಾ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ದುಡಿಯುವ ಕೈಗಳಿಗೆ ಉದ್ಯೋಗ ನೀಡಬೇಕು, ಇನ್ನೂ ಮಳೆ ಬಂದು ಹಾನಿಯಾದರೆ ಯಾವ ಇಲಾಖೆಗೆ ಸಂಬಂದ ಇರುವುದು ಅಲ್ಲಿ ವರದಿ ರೂಪಿಸಿ ಸರಕಾರಕ್ಕೆ ಸಲ್ಲಿಸಬೇಕು ಎಂದರು.
ಇದೇ ಸಂಧರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್, ತಾಪಂ ಸಹಾಯಕ ನಿರ್ದೇಶಕ ಸಂತೋಷ, ಸಂಪತ್ ಇತರ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.