ಚಳ್ಳಕೆರೆ :
ಡೆಂಗ್ಯೂ ಪ್ರಕರಣಗಳಿಗೆ ಕಡಿವಾಣ ಹಾಕಲು
ಅಧಿಕಾರಿಗಳು ಎಚ್ಚೆತ್ತುಕೊಳ್ಳಿ
ಇತ್ತೀಚಿನ ದಿನಗಳಲ್ಲಿ ಶೀತಾ ಗಾಳಿ ಬೀಸುತ್ತಿದ್ದು ಅಷ್ಟೇ ಅಲ್ಲದೆ
ಗ್ರಾಮೀಣ ಭಾಗಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಡೆಂಗ್ಯೂ
ಪ್ರಕರಣಗಳು ಹೆಚ್ಚುತ್ತಿವೆ.
ಅಧಿಕಾರಿಗಳು ಗ್ರಾಮ ಸ್ವಚ್ಛತೆಗೆ
ಮುಂದಾಗಬೇಕು ಎಂದು ರೈತ ಸಂಘ ರಾಜ್ಯ ಉಪಾಧ್ಯಕ್ಷ
ಬೇಡರಹಳ್ಳಿ ಬಸವರೆಡ್ಡಿ ಒತ್ತಾಯಿಸಿದರು.
ಪಟ್ಟಣದ ತಾಲೂಕು
ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಈ ವೇಳೆ ಮಾತನಾಡಿ,
ತಾಲೂಕಿನಲ್ಲಿ ನಾನಾ ಗ್ರಾಮಗಳಲ್ಲಿ ಚರಂಡಿಗಳಲ್ಲಿ ಕಲುಷಿತ ನೀರು
ನಿಲ್ಲುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ಹೆಚ್ಚುತ್ತಿದೆ ಎಂದರು.