ಚಳ್ಳಕೆರೆ :

ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ ಪುಣ್ಯ ಸ್ಮರಣೆ ಪ್ರಯುಕ್ತ

ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿ ಇರುವ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಬಾಬು ಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶುಭಾಷಯ ಕೋರಿದರು.

ಇನ್ನೂ ಬ್ಲಾಕ್ ‌ಕಾಂಗ್ರೇಸ್ ಮಹಿಳಾ ಅಧ್ಯಕ್ಷೆ ಗೀತಾ‌ಬಾಯಿ ಮಾತನಾಡಿ,
ಸ್ವಾತಂತ್ರ್ಯ ಹೋರಾಟಗಾರ, ಹಸಿರು ಕ್ರಾಂತಿಯ ಹರಿಕಾರ, ಶೋಷಿತರ ದಮನಿತರ ಪರವಾಗಿ ಹೋರಾಟ ನಡೆಸಿದ ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿಯಂದು ಅವರಿಗೆ ಅನಂತ ಪ್ರಣಾಮಗಳು. ಕೃಷಿ, ರಕ್ಷಣಾ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು ಎಂದರು‌

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ನಗರಸಭೆ ಸದಸ್ಯರಾದ ರಾಘವೇಂದ್ರ, ರಮೇಶ್ ಗೌಡ, ನಾಮ ನಿರ್ದೇಶನ ಸದಸ್ಯರಾದ ನೇತಾಜಿ ಪ್ರಸನ್ನಕುಮಾರ್, ವೀರಭದ್ರ,ಬಡಗಿ ಪಾಪಣ್ಣ, ನಟರಾಜ್, ಜಿಲ್ಲಾ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ಹಿರಿಯ ಮುಖಂಡರಾದ ಪಿ.ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯತ್ ಕೆಡಿಪಿ ಸದಸ್ಯರಾದ ಸುರೇಶ್ ಕುಮಾರ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ಬಾಯಿ, ಉಷಾ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆನಂದಕುಮಾರ್, ಮುಖಂಡರುಗಳಾದ ರುದ್ರಮುನಿ, ಜಯಣ್ಣ, ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Namma Challakere Local News
error: Content is protected !!