ಚಳ್ಳಕೆರೆ : ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಸ್ಥಳೀಯ ಶಾಸಕರು ಹಾಗೂ ಕರ್ನಾಟಕ ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ಶಾಸಕರ ಭವನದಲ್ಲಿ ಬಾಬುಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು, ಸ್ವಾತಂತ್ರ್ಯ ಹೋರಾಟಗಾರ, ಹಸಿರುಕ್ರಾಂತಿಯ ಹರಿಕಾರ ಬಾಬೂಜಿ ಅವರು ದೇಶಕ್ಕಾಗಿ ನೀಡಿದ ಕೊಡುಗೆಗಳು ಅಪಾರ. ಇಂತಹ ಮಹಾನ್ ನಾಯಕರ ಆದರ್ಶ, ಚಿಂತನೆಗಳು ಇಂದಿಗೂ ದಾರಿದೀಪವಾಗಿವೆ.
ಶೋಷಿತರ ದಮನಿತರ ಪರವಾಗಿ ಹೋರಾಟ ನಡೆಸಿದ ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿಯಂದು ಅವರಿಗೆ ಅನಂತ ಪ್ರಣಾಮಗಳು. ಕೃಷಿ, ರಕ್ಷಣಾ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು ಎಂದು ಹೇಳಿದರು.
ಇನ್ನೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ ಮಾತನಾಡಿ,
ಸ್ವಾತಂತ್ರ್ಯ ಹೋರಾಟಗಾರ, ದೇಶದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಕಾರ್ಮಿಕರ ಕಲ್ಯಾಣಕ್ಕಾಗಿ ದುಡಿದ ಮುತ್ಸದ್ಧಿ ಹಾಗೂ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರ,
‘ಜಗಜೀವನ್ ರಾಮ್ ಅವರು ಮೇಲು–ಕೀಳೆಂಬ ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದರು. ಸಾಮಾಜಿಕ ಬದಲಾವಣೆಗಾಗಿ ಹೋರಾಡಿದರು. ಶೋಷಿತರ ಪರವಾಗಿ ದನಿ ಎತ್ತಿದ ಅವರ ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ನಗರಸಭೆ ಸದಸ್ಯರಾದ ರಾಘವೇಂದ್ರ, ರಮೇಶ್ ಗೌಡ, ನಾಮ ನಿರ್ದೇಶನ ಸದಸ್ಯರಾದ ನೇತಾಜಿ ಪ್ರಸನ್ನಕುಮಾರ್, ವೀರಭದ್ರ,ಬಡಗಿ ಪಾಪಣ್ಣ, ನಟರಾಜ್, ಜಿಲ್ಲಾ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ಹಿರಿಯ ಮುಖಂಡರಾದ ಪಿ.ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯತ್ ಕೆಡಿಪಿ ಸದಸ್ಯರಾದ ಸುರೇಶ್ ಕುಮಾರ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ಬಾಯಿ, ಉಷಾ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆನಂದಕುಮಾರ್, ಮುಖಂಡರುಗಳಾದ ರುದ್ರಮುನಿ, ಜಯಣ್ಣ, ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.