ರಾಜ್ಯ ಸರ್ಕಾರದ ನಡೆ ಖಂಡಿಸಿ ಎಸ್ಸಿ ಎಸ್ಟಿ ಶಾಸಕರು ರಾಜೀನಾಮೆ ನೀಡಲಿ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ.

ನಾಯಕನಹಟ್ಟಿ : ಜುಲೈ 8. ರಾಜ್ಯ ಸರ್ಕಾರದಲ್ಲಿ ಎಸ್ಸಿ ಎಸ್ಟಿ ಸಮುದಾಯದಿಂದ ಆಯ್ಕೆಯಾದ ಶಾಸಕರು ರಾಜೀನಾಮೆ ನೀಡಲಿ ಎಂದು ಬಿಜೆಪಿ ಮಾಜಿ ಶಾಸಕ ತಿಪ್ಪೇಸ್ವಾಮಿ ಹೇಳಿದ್ದಾರೆ.

ಸೋಮವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ರಾಜ್ಯ ಸರ್ಕಾರದಲ್ಲಿ ಎಸ್ಸಿ ಎಸ್ಟಿ ಸಮುದಾಯಗಳಿಗೆ ಅನ್ಯಾಯವಾಗಿದೆ.
ಎಸ್ ಸಿ ಎಸ್ ಟಿ ಸಮುದಾಯಗಳಿಗೆ ಮೀಸಲಾಗಿದ್ದ ಹಣವನ್ನು ರಾಜ್ಯ ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ಬಳಕೆ ಮಾಡಿದೆ. ಇದರಿಂದ ತಳ ಸಮುದಾಯಗಳಿಗೆ ನೀಡಬೇಕಾಗಿದ್ದ ಸವಲತ್ತುಗಳನ್ನು ಸರ್ಕಾರ ಕಸಿದುಕೊಂಡಿದೆ. ಸಂವಿಧಾನಬದ್ಧವಾಗಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿಗಳು ತಳ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ ಎಂದರು.
ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ 187.33 ಕೋಟಿ ಹಣವನ್ನು ಆಂಧ್ರಪ್ರದೇಶದ ತೆಲಂಗಣ ಬಂಗಾರದ ಅಂಗಡಿಗಳು ಬಾರ್ ಮಾಲೀಕರು ಗುತ್ತಿಗೆದಾರರಿಗೆ ವರ್ಗಾಯಿಸಿ ಚುನಾವಣೆಗೆ ಬಳಸಿಕೊಂಡಿದ್ದಾರೆ ಇದಕ್ಕಾಗಿ 200ರಿಂದ 700 ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ. ಮತ್ತು ಎಎಸ್ಪಿ ಮತ್ತು ಟಿಎಸ್ಪಿ ಯೋಜನೆಯಲ್ಲಿ 25,000 ಕೋಟಿ ರೂಗಳು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ ಇದರಿಂದ ಎರಡು ಸಮುದಾಯಗಳಿಗೆ ರಾಜ್ಯ ಸರ್ಕಾರ ವಂಚನೆ ಮಾಡಿದರು ಕೂಡ ಕಾಂಗ್ರೆಸ್ ಪಕ್ಷದಲ್ಲಿ ಎಸ್ಟಿ ಮೀಸಲು ಕ್ಷೇತ್ರದ ಸಮುದಾಯದಿಂದ ಆಯ್ಕೆಯಾದ 15 ಮತ್ತು ಇತರೆ ಕ್ಷೇತ್ರಗಳಿಂದ ಆಯ್ಕೆ 2 ಶಾಸಕರು ತುಟಿ ಬಿಚ್ಚುತ್ತಿಲ್ಲ ಏಕೆ ಇದನ್ನು ಖಂಡಿಸಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ. ಶಿವಣ್ಣ, ಜಿಲ್ಲಾ ಕಾರ್ಯದರ್ಶಿ ಪಾಲಯ್ಯ, ಶಿವಲಿಂಗಪ್ಪ, ಬಡಗಿ ತಿಪ್ಪೇಸ್ವಾಮಿ, ಮಲ್ಲೂರಹಳ್ಳಿ ಗುಂಡಯ್ಯ, ಶರಣಪ್ಪ, ತಿಪ್ಪೇಸ್ವಾಮಿ,ಇದ್ದರು.

Namma Challakere Local News
error: Content is protected !!