ಮೆರವಣಿಗೆಗೆ ಮೆರಗು ನೀಡಿದ ವಿವಿಧ ಜಾನಪದ ಕಲಾತಂಡಗಳು


ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ


ಚಳ್ಳಕೆರೆ : “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ ಚಳ್ಳಕೆರೆ ನಗರದಲ್ಲಿ ವಿಜೃಂಭಣೆಯಿAದ ನಡೆಯಿತು.
ತಾಲೂಕು ಆಡಳಿತ, ತಾಲೂಕು ಪಂಚಾಯಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳು, ಗಣ್ಯರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಗರದ ಬಳ್ಳಾರಿ ರಸ್ತೆಯ ಚಳ್ಳಕೆರೆಮ್ಮ ದೇವಾಸ್ಥಾನ ಬಳಿ ಸ್ವಾಗತಿಸಿದರು, ಬಳಿಕ ವಿವಿಧ ಜಾನಪದ ಕಲಾತಂಡಗಳೊAದಿಗೆ ಮೆರವಣಿಗೆ ನಡೆಸಲಾಯಿತು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರು ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು. ನಗರದ ಬಳ್ಳಾರಿ ರಸ್ತೆಯ ಚಳ್ಳಕೆರೆಮ್ಮ ದೇವಾಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ನೆಹರು ವೃತ್ತದಿಂದ ಅಂಬೇಡ್ಕರ್ ವೃತ್ತ, ವಾಲ್ಮೀಕಿ ವೃತ್ತದ ಮಾರ್ಗವಾಗಿ ಪ್ರವಾಸಿ ಮಂದಿರದವರೆಗೆ ಸಂಭ್ರಮ, ಸಡಗರದಿಂದ ನಡೆಯಿತು.

ಶಾಸಕ ಟಿ.ರಘುಮೂರ್ತಿ
ಮಾತನಾಡಿ, ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹಂಪಿಯಲ್ಲಿ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು.

ಈಗ ರಥವು ನಮ್ಮ ಚಳ್ಳಕೆರೆ ಗೆ ಆಗಮಿಸಿದ್ದು, ಯಾತ್ರೆಗೆ ತಾಲೂಕಿನಲ್ಲಿ ಕನ್ನಡದ ಮನಸುಗಳು ವಿಜೃಂಭಣೆಯಿಂದ ಸ್ವಾಗತ ನೀಡಿವೆ.

ಕರ್ನಾಟಕ ಜ್ಯೋತಿ ರಥಯಾತ್ರೆಯು ಜಿಲ್ಲೆಯಾದ್ಯಂತ ಜುಲೈ 14ರವರೆಗೂ ಸಂಚರಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ರೇಹಾನ್ ಪಾಷ, ತಾಲ್ಲೂಕು ಪಂಚಾಯತ ಇಓ ಶಶಿಧರ್,
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್,
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ತಾಲೂಕು ಅಧ್ಯಕ್ಷ ವೀರಭದ್ರಸ್ವಾಮಿ, ಪತ್ರಕರ್ತರಾದ ಚಿತ್ತಯ್ಯ,
, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಹರಿಪ್ರಸಾದ್, ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.

Namma Challakere Local News
error: Content is protected !!