ಚಳ್ಳಕೆರೆ :
ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಮನೆಕಟ್ಟಿಕೊಂಡು ವಾಸ ಮಾಡುತ್ತಿರುವವರಿಗೆ ತಹಶೀಲ್ದಾರ್ ರೇಹಾನ್ ಪಾಷ ಬಿಗ್ ಶಾಕ್ ನೀಡಿದ್ದಾರೆ.
ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕೇನಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಅರಣ್ಯ ಇಲಾಖೆಗೆ ಸೇರಿದ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಮನೆಗಳನ್ನು ಕಟ್ಟಿಕೊಂಡರೆ ಇನ್ನು ಕೆಲವರು ಭೂಮಿ ಉಳುಮೆ ಮಾಡಿಕೊಂಡಿರುವ ಸ್ಥಳಕ್ಕೆ ತಹಶೀಲ್ದಾರ್ ರೇಹಾನ್ ಪಾಷ ಗುರುವಾರ ಭೇಟಿ ನೀಡಿ ಒಂದು ವಾರದೊಳಗೆ ತೆರವುಗೊಳಿಸದಿದ್ದರೆ ನಾವೇ ಬಂದು ತೆರವುಗೊಳಿಸ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಲಿಂಗೇಗೌಡ ಗ್ರಾಮಲೆಕ್ಕಾಧಿರಿ ಉಪಸ್ಥಿತರಿದ್ದರು.