ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ದೊರೆಗಳಹಟ್ಟಿ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನ ಆವರಣದಲ್ಲಿ ಸ್ವಚ್ಛತಾ ಕಾರ್ಯ
ನಾಯಕನಹಟ್ಟಿ :: ಆಗಸ್ಟ 6. ಸಮೀಪದ ಮನಮೈನಹಟ್ಟಿ ವಲಯದ ನಲಗೇತನಹಟ್ಟಿ ಗ್ರಾ.ಪಂ ವ್ಯಾಪ್ತಿಯ ದೊರೆಗಳಹಟ್ಟಿ ಕಾರ್ಯಕ್ಷೇತ್ರದಲ್ಲಿ ಧಾರ್ಮಿಕ ಶ್ರದ್ಧಾ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಊರಿನ ಮುಖಂಡರು.. ಹಾಗೂ ಸಂಘದ ಸದಸ್ಯರು ಉಪಸ್ಥಿತಿಯಲ್ಲಿ ದೇವಸ್ಥಾನದ ಸ್ವಚ್ಛತೆ… ಆವರಣದ ಸ್ವಚ್ಛತೆ ಮಾಡಿ ರಂಗೋಲಿ ಹಾಕುವುದರ ಮೂಲಕ ಚೌಡೇಶ್ವರಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಚೌಡೇಶ್ವರಿ ದೇವಿಯ ದೇವಸ್ಥಾನದ ಅರ್ಚಕರಾದ ಮಂಜುನಾಥ್, ಮತ್ತು ಊರಿನ ಮುಖಂಡ ಪರ್ವತ ಸ್ವಾಮಿ, ರಾಜಣ್ಣ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಅನುಸೂಯಮ್ಮ, ಉಪಾಧ್ಯಕ್ಷೆ ರೇಣುಕಮ್ಮ, ಮನಮೈನಹಟ್ಟಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಜಯಶ್ರೀ, ಸೇವಾ ಪ್ರತಿನಿಧಿಗಳಾದ ನೇತ್ರಾವತಿ. ಸಂಘದ ಸದಸ್ಯರಾದ ಶಾಂತಮ್ಮ, ನೇತ್ರಮ್ಮ, ಗಂಗಮ್ಮ, ಮಮತಾ, ಶಿಲ್ಪಮ್ಮ, ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದ್ದರು……..