ಚಳ್ಳಕೆರೆ :
ಮುಡಾ ಹಗರಣದಲ್ಲಿ ಸಿಎಂ ಪಾತ್ರವಿಲ್ಲ: ಮಾಜಿ ಸಚಿವ
ಹೆಚ್. ಆಂಜನೇಯ
ಬಿಜೆಪಿ ಜೆಡಿಎಸ್ ಅಧಿಕಾರದಲ್ಲಿದ್ದಾಗ ನಡೆಸಿದ ಅವ್ಯವಹಾರ,
ಭ್ರಷ್ಟಾಚಾರ, ಸ್ವಜನಪಕ್ಷಪಾತ ಮರೆತು ಮುಖ್ಯಮಂತ್ರಿ
ಸಿದ್ದರಾಮಯ್ಯನವರ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ
ಪಾದಯಾತ್ರೆ ಹೊರಟಿದ್ದಾರೆಂದು ಹೊಳಲ್ಕೆರೆ ಕ್ಷೇತ್ರದ ಮಾಜಿ ಶಾಸಕ
ಹಾಗು ಸಚಿವ ಹೆಚ್. ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದರು.
ಅವರು ಚಿತ್ರದುರ್ಗದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ
ಮಾತನಾಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ
ನಿವೇಶನ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲವೆಂದರು.