ಚಳ್ಳಕೆರೆ :

ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್
ನಡೆಯಲಿದೆ

ಮುಂಬರುವ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ
ಅದಾಲತ್ ನಡೆಯಲಿದ್ದು, ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ
ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ,
ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್, ನೀರು ಇತರೆ ಸೇವಾ
ಶುಲ್ಕದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ.

ಇದರರೊಂದಿಗೆ ನ್ಯಾಯಾಲಯದ ವ್ಯಾಜ್ಯದಲ್ಲಿರುವ ನಾನ್
ಕಾಂಪೌಂಡಬಲ್ ಹಾಗೂ ಗಂಭೀರ ತರದ ಅಪರಾಧಿಕ
ಪ್ರಕರಣಗಳನ್ನು ಹೊರತು ಪಡಿಸಿ, ಇತರೆ ಪ್ರಕರಣಗಳನ್ನು ರಾಜಿ
ಮಾಡಿಕೊಳ್ಳಬಹುದು ಎಂದು ನ್ಯಾಯಾಧೀಶ ರೋಣ ವಾಸುದೇವ
ಹೇಳಿದರು.

ಲೋಕ ಅದಾಲತ್‌ನಲ್ಲಿ 4, 973 ಪ್ರಕರಣಗಳು ಇತ್ಯರ್ಥವಾಗಿ
ಬರುವ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್
ನಡೆಯಲಿದ್ದು, ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ
ಪ್ರಕರಣಗಳನ್ನು, ತೀರ್ಮಾನ ಮಾಡಿಕೊಳ್ಳಬಹುದು.

ಕಳೆದ ಜು
13 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ, ಜಿಲ್ಲೆಯಲ್ಲಿ
ಬಾಕಿಯಿದ್ದ 4973 ವ್ಯಾಜ್ಯ ಪ್ರಕರಣಗಳನ್ನು ರಾಜಿ ಮೂಲಕ
ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ
ನ್ಯಾಯಾಧೀಶರಾದ ರೋಣ ವಾಸುದೇವ ಹೇಳಿದರು.

ಚಿತ್ರದುರ್ಗ
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಮಾತಾಡಿದರು.

Namma Challakere Local News
error: Content is protected !!