ಚಿತ್ರದುರ್ಗ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆ
ಕೆ.ಪಿ.ಸಿ.ಸಿ.ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋದಿಸಿ ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ನಡೆದ ಬೃಹತ್ ಪ್ರತಿಭಟನಾ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ ರವರು, ಶಾಸಕರುಗಳಾದ ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಮಾಜಿ ಸಚಿವರಾದ ಹೆಚ್.ಆಂಜನೇಯ, ಮಾಜಿ ಸಂಸದರಾದ ಬಿ ಎನ್ ಚಂದ್ರಪ್ಪ ರವರು, ಕರ್ನಾಟಕ ಆದಿ ಜಾಂಬವ ನಿಗಮದ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ್ ರವರು, ದ್ರಾಕ್ಷಾ ರಸ ನಿಗಮದ ಅಧ್ಯಕ್ಷರಾದ ಯೋಗೇಶ್ ಬಾಬು ರವರು, ಜಿಲ್ಲಾಧ್ಯಕ್ಷರಾದ ತಾಜ್ ಪೀರ್, ಜಿಲ್ಲಾ ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ನಾಗರಾಜ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.