ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಟಿ ರಘುಮೂರ್ತಿ,
ಚಳ್ಳಕೆರೆ
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಕ್ರೀಡೆಯಿಂದ ಮಕ್ಕಳ ದೈಹಿಕ ಬಲಾಡತೆ ದೈಹಿಕ ಆತ್ಮಸ್ಥೈರ್ಯ ದೊಂದಿಗೆ ತಮ್ಮ ಜೀವನದ ಗುರಿಯನ್ನು ಮುಟ್ಟಬಹುದು ಎಂದು ಶಾಸಕ ಟಿ ರಘುಮೂರ್ತಿ ಮಕ್ಕಳಿಗೆ ಕಿವಿ ಮಾತು ಹೇಳಿದರು ,
ಇವರು ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಿರುವ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಇವರು ,
ಇತ್ತೀಚಿನ ದಿನಗಳಲ್ಲಿ ರಾಂಕ್ ಪಡೆಯಬೇಕು ಎಂಬ ಆಸೆ ವಿದ್ಯಾರ್ಥಿಗಳಲ್ಲಿ ಇರುತ್ತದೆ ಆದರೆ ರಾಂಕ್ ಪಡೆಯುವುದರ ಜೊತೆಯಲ್ಲಿ ಸ್ಪರ್ಧಾತ್ಮಕ ಕ್ರೀಡೆಯಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕ್ರೀಡೆ ಕೊಡುತ್ತದೆ ಇಂದಿನ ವಿದ್ಯಾರ್ಥಿಗಳು ಶಿಕ್ಷಣವೇ ಮುಖ್ಯವೆಂದು ಹೋದರೆ ಆರೋಗ್ಯ ಕುಂಠಿತಗೊಳ್ಳುತ್ತದೆ ಈ ಹಿನ್ನಲೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟಕ್ಕೆ ಹೋಗಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು
ಇನ್ನು ಈ ಸಂದರ್ಭದಲ್ಲಿ ಮಕ್ಕಳ ಜೊತೆ ಶಾಸಕರು ಪ್ರತಿಜ್ಞಾವಿಧಿಯನ್ನು ಮಾಡಿದರು
ಇನ್ನು ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಓ ಸುರೇಶ್, ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಭದ್ರಪ್ಪ, ಪರಶಾಂಪುರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ್, ಜಿಟಿ ಶ್ರೀನಿವಾಸ್, ಸುನಿಲ್ ನಾಯಕ್, ಸೇರಿದಂತೆ ಅನೇಕರು ಇದ್ದರು