ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ರವರ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮತ್ತು ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ ಸುಧಾಕರ ರವರು, ಜಿಲ್ಲಾಧಿಕಾರಿಗಳಾದ ವೆಂಕಟೇಶ್, ಶಾಸಕರು ಹಾಗೂ ಆಹಾರ ನಿಗಮದ ಅಧ್ಯಕ್ಷರಾದ ಶ್ರೀ ಬಿ.ಜಿ.ಗೋವಿಂದಪ್ಪ, ಶಾಸಕರಾದ ಡಾ.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಂ ಕೆ ತಾಜ್ ಪೀರ್ ರವರು, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!