ಚಳಕೆರೆ : ಪೋಷಣ್ ಅಭಿಯಾನ ಯೋಜನೆಯಡಿ, ಪೋಷಣ್ ಮಾಸಚರಣೆ ಕಾರ್ಯಕ್ರಮವನ್ನು ಚಳ್ಳಕೆರೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಚಳ್ಳಕೆರೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಪಾರ ಸಿವಿಲ್ ನ್ಯಾಯಾಧೀಶರಾದ ಎಚ್ ಆರ್ ಹೇಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,ಮಹಿಳೆಯರು ಪೌಷ್ಠಿಕ ಆಹಾರ ದೊರಕುವಂತೆ ನೋಡಿಕೊಳ್ಳಬೇಕು, ಪೌಷ್ಟಿಕಾಹಾರ ದೊರಕಿಸುವ ಉದ್ದೇಶ ಈ ಪೋಷಣ್ ಕಾರ್ಯಕ್ರಮ ಇದಾಗಿದೆ. ಆದ್ದರಿಂದ ಪ್ರತಿ ವರ್ಷ ಮಾರ್ಚ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ ಮಾಡುತ್ತೆವೆ , ಮಹಿಳೆಯರ ಕೊರತೆಗಳ ನೀಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವಾಗಲಿದೆ ಎಂದರು.
ಇದೇ ಸಂಧರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್ ಶಶಿಧರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ ಹರಿಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಸುರೇಶ್, ವಕೀಲರ ಸಂಘದ ಉಪಾಧ್ಯಕ್ಷ ಬಿ ಪಾಲಯ್ಯ, ಪ್ರಧಾನ ಕಾರ್ಯದರ್ಶಿ ಎಂ ಸಿದ್ದರಾಜು, ಟಿ ರುದ್ರಯ್ಯ, ಡಿ ಶಿಲ್ಪಾ, ಆರೋಗ್ಯ ಸಹಾಯಕ ಅಧಿಕಾರಿ ತಿಪ್ಪೇಸ್ವಾಮಿ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು