ಕಾಂಗ್ರೆಸ್ ಸರ್ಕಾರ ಅತಿ ಶೀಘ್ರದಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದ ಮಾಜಿ ಶಾಸಕ: ನೇರಲಗುಂಟೆ ತಿಪ್ಪೇಸ್ವಾಮಿ.

ನಾಯಕನಹಟ್ಟಿ : ಸಮೀಪದ ನೇರಲಗುಂಟೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಭವಿಷ್ಯ ನುಡಿದರು.

ನಂತರ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಆದೇಶವನ್ನು ರಾಜ್ಯ ಸರ್ಕಾರಗಳ ನಿರ್ಧಾರಕ್ಕೆ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ ಕಾಂಗ್ರೆಸ್ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಕಾಳಜಿ ಇದ್ದಿದ್ದರೆ, ಇಷ್ಟೊತ್ತಿಗೆ ಯಾವಾಗಲೂ ಒಳ ಮೀಸಲಾತಿ ಜಾರಿಗೆ ತರುತ್ತಿದ್ದರು. ಆದರೆ ಒಳ ಮೀಸಲಾತಿ ಜಾರಿಗೆ ತರದೆ ಕೇವಲ ವೋಟ್ ಬ್ಯಾಂಕಿಗಾಗಿ ಪರಿಶಿಷ್ಟ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ. ಪರಿಶಿಷ್ಟ ಜಾತಿಯಲ್ಲಿ ಮೂರು, ನಾಲ್ಕು ಜನಾಂಗಗಳನ್ನು ಹೊಂದಿದ್ದು, ಅವರನ್ನೆಲ್ಲ ಓಲೈಸುವ ಪರಿಸ್ಥಿತಿ ಬರುತ್ತದೆ. ಆದ್ದರಿಂದ ಇದನ್ನು ಮೀನಾ ಮೇಷ ಮಾಡಿಬಿಟ್ಟು ಹಿಂದಕ್ಕೆ ಎಳಿಯುವಂತ ಕೆಲಸವನ್ನು ಕಾಂಗ್ರೆಸ್ ನವರು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಣವನ್ನು ಬಿಟ್ಟು ಭಾಗ್ಯಗಳಿಗೆ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಲ್ಲಿರುವ ಮುಖಂಡರುಗಳು, ಮಾಜಿ ಹಾಗೂ ಹಾಲಿ ಶಾಸಕರುಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗಕ್ಕೆ ಅನ್ಯಾಯವಾಗಿದೆ ಎಂದು ಏಕೆ ಧ್ವನಿ ಎತ್ತುತ್ತಿಲ್ಲ?
ಪರಿಶಿಷ್ಟ ಜನಾಂಗಗಳಿಗೆ ಅನ್ಯವಾಗಿದೆ, ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿಗೆ ತನ್ನಿ ಎಂದು ಧ್ವನಿ ಎತ್ತಬಹುದಿತ್ತು ? ಆದರೆ ಯಾರೂ ಧ್ವನಿ ಎತ್ತುವ ಇಚ್ಛಾಶಕ್ತಿ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಾನು ನೀನು ಎಂದು ಕಿತ್ತಾಡಿ ಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಶಾಸಕ ರಾಜಣ್ಣ ನವರ ಸಹಕಾರ ಇಲಾಖೆಯಲ್ಲಿ 200 ಕೋಟಿ ಹಗರಣ ಕುರಿತು ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ನೋಡಿದ್ದೇನೆ. ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ. ಮೂಡ ಹಗರಣ, ವಾಲ್ಮೀಕಿ ಹಗರಣಗಳು, ಇನ್ನು ಹಲವಾರು ಹಗರಣಗಳು ಬಯಲಿಗೆ ಬರುತ್ತಿವೆ. ಎಲ್ಲಾ ನಿಗಮಗಳ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಶತ ಪ್ರಯತ್ನ ಪಡುತ್ತಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಣವನ್ನು ಬಳಸಿಕೊಂಡು ಅನ್ಯಾಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದರು.

About The Author

Namma Challakere Local News
error: Content is protected !!