ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಮುಖಂಡ ಪೂರ್ಣ ಓಬಯ್ಯ.
ನಾಯಕನಹಟ್ಟಿ:: ಗಣಿತ ಕಲಿಕಾ ಆಂದೋಲನ ಸ್ಪರ್ಧೆಗಳಿಂದ ವಿದ್ಯಾರ್ಥಿಗಳ ಕಲಿಕಾ ಉತ್ಸವ ಹೆಚ್ಚಾಗುತ್ತದೆ ಎಂದು ಮುಖಂಡ ಪೂರ್ಣ ಓಬಯ್ಯ ಹೇಳಿದ್ದಾರೆ.
ಶುಕ್ರವಾರ ನಲಗೇತನಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಕ್ಷರ ಫೌಂಡೇಶನ್ ಸಹಾಯಕದೊಂದಿಗೆ ಗಣಿತ ಕಲಿಕಾ ಆಂದೋಲನ ಅಡಿಯಲ್ಲಿ 4.5. ಮತ್ತು 6ನೇ ತರಗತಿಯ ಮಕ್ಕಳ ನಲಗೇತನಹಟ್ಟಿ ಗ್ರಾ.ಪಂ. ಮಟ್ಟದ ಗಣಿತ ಸ್ಪರ್ಧೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಪ್ರೋತ್ಸಾಹ ಧನವನ್ನು ನೀಡಿ ಮಾತನಾಡಿದರು. ಶಿಕ್ಷಣ ಇಲಾಖೆ ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಗಣಿತ ಕಲಿಕಾ ಆಂದೋಲನ ಸ್ಪರ್ಧೆಗಳಿಂದ ವಿದ್ಯಾರ್ಥಿಗಳ ಕಲಿಕೆ ಉತ್ಸವ ಹೆಚ್ಚಾಗಿ ವಿದ್ಯಾರ್ಥಿಗಳ ಭೌದ್ದಿಕ ಮಟ್ಟ ವೃದ್ಧಿಯಾಗಲು ನೆರವಾಗುತ್ತದೆ. ಮನುಷ್ಯನಿಗೆ ಗಣಿತ ತುಂಬಾ ಮಹತ್ವವಾದ ವಿಷಯ ಆದ್ದರಿಂದ ವಿದ್ಯಾರ್ಥಿಗಳು ಸತತ ಪ್ರಯತ್ನ ಪರಿಶ್ರಮದಿಂದ ಉತ್ತಮ ಶಿಕ್ಷಣವನ್ನು ಪಡೆದು ಹೆತ್ತವರಿಗೆ ಮತ್ತು ಶಾಲೆಗೆ ಕೀರ್ತಿ ತನ್ನಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಆರ್ ಮುಸ್ಟುರಪ್ಪ, ಶಿಕ್ಷಕರಾದ ಕೆ.ಸಿ. ಮಹಾಂತೇಶ್, ಬಿ ಗುರುಮೂರ್ತಿ, ಬಿ.ಪಿ. ಹೊನ್ನಪ್ಪ ಚಾರಿ, ಪಿ ಸುರೇಶ್, ಆರ್ ದೀಪಾ, ಎಂ.ಬುಡೇನ್, ಹಾಗೂ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಇದ್ದರು