ಮಡಿಲು ಸಂಸ್ಥೆಯ ವತಿಯಿಂದ ಸ್ವಚ್ಛತೆ ಸೇವಾ ಕಾರ್ಯಕ್ರಮಕ್ಕೆ ಚಾಲನೆ
ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯ: ಯುವ ಮುಖಂಡ ಪ್ರಕಾಶ್ ಎಸ್
ಚಳ್ಳಕೆರೆ: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆಧ್ಯ ಕರ್ತವ್ಯ ಎಂದು ಗೋಪನಹಳ್ಳಿ ಗ್ರಾಮದ ಯುವ ಮುಖಂಡ ಪ್ರಕಾಶ್ ಎಸ್ ಹೇಳಿದರು.
ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಹಾಗೂ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತೆ ಸೇವೆ ಕಾರ್ಯಕ್ರಮದಡಿ ಗ್ರಾಮದಲ್ಲಿನ ದೇವಸ್ಥಾನ ಆವರಣವನ್ನ ಸ್ವಚ್ಛಗೊಳಿಸಿ ತಿಳಿಸಿದರು.
ಕಳೆದ ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಮಾರಮ್ಮ ದೇವಿಯ ಹಬ್ಬವನ್ನು ಆಚರಣೆ ಮಾಡಲಾಗಿದ್ದು ಇದರಿಂದ ದೇವಸ್ಥಾನದ ಅಕ್ಕ ಪಕ್ಕ ಹಾಗೂ ಬಸ್ ನಿಲ್ದಾಣದಲ್ಲಿ ಕಸ ತುಂಬಿಕೊಂಡಿದ್ದು ಸ್ವಚ್ಛತೆ ಮರಿಚಿಕೆಯಾಗಿದ್ದು, ಗ್ರಾಮದ ಯುವಕರು ಎಲ್ಲಾರೂ ಸೇರಿ ಸ್ವಚ್ಛತೆಯ ಸೇವೆ ಕಾರ್ಯಕ್ರಮದ ಮೂಲಕ ಸ್ವಚ್ಛತೆಯನ್ನು ಮಾಡಿದ್ದೆವೆ. ಇದರಿಂದ ನಮ್ಮಲ್ಲಿ ಆಸ್ಪತೃಪ್ತಿ ಮೂಡಿದೆ, ಎಲ್ಲರೂ ಒಟ್ಟಾಗಿ ಸೇರಿ ನಮ್ಮ ಸುತ್ತಮುತ್ತಲಿನ ಸ್ವಚ್ಛತೆಗೆ ನಾವು ಆದ್ಯತೆಯನ್ನು ನೀಡಬೇಕಾಗಿದೆ ಎಂದು ತಿಳಿಸಿದರು.
ಸ್ವಚ್ಛತಾ ಸೇವ ಕಾರ್ಯಕ್ರಮಕ್ಕೆ ಭಾಗವಹಿಸಿದ ಕೆಆರ್‌ಎಸ್ ಪಕ್ಷದ ಮಣಿಕಂಠ ಎಸ್ ಮಾತನಾಡಿ ಸ್ವಚ್ಛತೆ ಕಾರ್ಯಕ್ರಮ ಒಂದು ದಿನಕ್ಕೆ ಸೀಮಿತವಾಗದೆ ನಮ್ಮ ನಿಮ್ಮೆಲ್ಲರ ಬದುಕಿನಲ್ಲಿ ಪ್ರತಿನಿತ್ಯ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಂಡರೆ ನಮ್ಮ ಜೀವನ ಉತ್ತಮವಾಗಿರುತ್ತದೆ ಗಾಂಧೀಜಿ ಕಂಡಂತಹ ಸ್ವಚ್ಛತಾ ಸಂಕಲ್ಪ ಯಶಸ್ವಿಯಾಗಲು ಪ್ರತಿಯೊಬ್ಬರ ಸಹಕಾರ ಬಹಳ ಮುಖ್ಯವಾಗುತ್ತದೆ ಹಾಗೂ ಸ್ವಚ್ಛತೆ ನಮ್ಮ ಜೀವ ಆಗಬೇಕು ಸ್ವಚ್ಛತೆ ನಮ್ಮ ಬದುಕಾಗಬೇಕು ಆಗ ಮಾತ್ರ ಸ್ವಚ್ಛತೆ ಕಾಪಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮಡಿಲು ಸಂಸ್ಥೆಯ ನಿರ್ದೇಶಕ ದ್ಯಾಮ ಕುಮಾರ್ ಮಾತನಾಡಿ, ಸ್ವಚ್ಛತಾ ಕಾರ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಿದಾಗ ಮಾತ್ರ ಸುಂದರವಾದ, ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ, ಪರಿಸರ ಸ್ವಚ್ಛತೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗುತ್ತದೆ ಹಾಗಾಗಿ ಎಲ್ಲರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಮನುಕುಲವು ಪರಿಸರವನ್ನು ವಿನಾಶದತ್ತ ಕೊಂಡೊಯ್ಯುತ್ತಿದ್ದಾರೆ. ಇದರಿಂದ ನಮಗೆ ಅನೇಕ ರೀತಿಯ ಸಮಸ್ಯೆಗಳು ಉದ್ಭವಾಗುತ್ತಿವೆ. ಈ ಸಮಸ್ಯೆಗಳಿಂದ ನಾವು ಮುಕ್ತರಾಗಲು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳುವುದು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಹೊಣೆಯಾಗಿರುತ್ತದೆ. ಇದರಿಂದ ಪರಿಸರವನ್ನು ನಾವು ಸಂರಕ್ಷಣೆ ಮಾಡಿದರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ ಪ್ರತಿಯೊಬ್ಬರು ಸ್ವಚ್ಛತೆಯನ್ನು ಕಾಪಾಡಿಕೊಂಡಗ ಮಾತ್ರ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಗೋಪನಹಳ್ಳಿ ಗ್ರಾಮದ ಮಂಜುನಾಥ್ ಜಿ.ಕೆ ತಿಳಿಸಿದರು.
ಈ ಸಂದರ್ಭದಲ್ಲಿ ಮಡಿಲು ಸಂಸ್ಥೆಯ ಕಾರ್ಯದರ್ಶಿ ಅನಂದ್ ನಿರ್ದೇಶಕ ಮಹಾಂತೇಶ್, ಪ್ರದೀಪ್, ದರ್ಶನ್, ಪ್ರವೀಣ್, ಗ್ರಾಮಸ್ಥರಾದ ಅರುಣ್ ಕುಮಾರ್, ದಯಾನಂದ, ದರ್ಶನ್, ದಿನೇಶ್, ಶರತ್, ಉಮೇಶ್, ಧನುಷ್, ರಂಗಸ್ವಾಮಿ, ಗ್ರಾಮಸ್ಥರು ಇದ್ದರು.