ಚಳ್ಳಕೆರೆ : ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟರೆ, ಸಮಾಜ ಕೂಡ ಸುಸ್ಥಿರವಾಗಿರುತ್ತದೆ. ಅದರ ಜೊತೆಜೊತೆಗೆ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ವಾಸವಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಜೆ.ಶ್ರೀರಾಮುಲು ಹೇಳಿದರು.
ಅವರು ನಗರದ ವಾಸವಿ ಪದವಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದರು,
ಹಸಿ ಕಸ ಒಣ ಕಸವನ್ನು ವಿಂಗಡಣೆ ಮಾಡಿ ಕೊಡುವುದರಿಂದ ಕಲುಷಿತ ಪ್ರದೇಶ ವಾಗುವುದನ್ನು ತಡೆಗಟ್ಟಬಹುದು ವಿದ್ಯಾರ್ಥಿ ದೆಸೆಯಿಂದಲೇ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಬೇಕು, ಆಗ ಮಾತ್ರ ಗಾಂಧೀಜಿ ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯುವಂತಾಗಬೇಕು ಎಂದು ಹೇಳಿದರು.
ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಸೇವೆ ಹಮ್ಮಿಕೊಂಡ ವಾಸವಿ ಪದವಿ ಕಾಲೇಜಿನ ವಿದ್ಯಾರ್ಥಿಗಳು. ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಚಾಲನೆದರು.
ಇನ್ನು ವಾಸವಿ ಪದವಿ ಕಾಲೇಜಿನ ಎನ್ ಎಸ್‌ಎಸ್ ಘಟಕ ಅಧಿಕಾರಿ ಪ್ರಭಾಕರ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಿವಾರೆಡ್ಡಿ, ಹಾಗೂ ಕಾಲೇಜಿನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಚ್ಚತಾ ಕಾರ್ಯದಲ್ಲಿ ಭಾಗಿಯಾಗಿದ್ದರು

About The Author

Namma Challakere Local News
error: Content is protected !!