ಚಳ್ಳಕೆರೆ: ‘ಕಸ ವಿಂಗಡಣೆ ಮತ್ತು ವಿಲೇವಾರಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ
ರೋಣ ವಾಸುದೇವ ನಗರಸಭೆ ಸಿಬ್ಬಂದಿಗೆ ಸೂಚಿಸಿದರು…
ನಗರದ ವಾಲ್ಮೀಕಿ ನಗರದಲ್ಲಿ ನಗರಾಭಿವೃದ್ಧಿ ಇಲಾಖೆ, ಸ್ವಚ್ಛ ಭಾರತ್ ಮಿಷನ್ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಇ-ತ್ಯಾಜ್ಯ ಸಂಗ್ರಹಣ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು..
ಕಸದಿಂದ ಹಲವು ರೋಗಗಳು ಹರಡುತ್ತಿರುವ ಕಾರಣ ಹಳೆ ಪ್ಲಾಸ್ಟಿಕ್, ಪೇಪರ್, ಕಡ್ಡಿ, ಕಸ ಮುಂತಾದ ತ್ಯಾಜ್ಯವನ್ನು ಎಲ್ಲೆಂದರಲ್ಲೆ ಎಸೆಯಬಾರದು.
ಮನೆಯ ಸುತ್ತಲಿನ ಪರಿಸರ ಸದಾ ಸ್ವಚ್ಛವಾಗಿರಿಸಿಕೊಳ್ಳುವುದರ ಕಡೆಗೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಪರಿಸರ ಎಂಜಿನಿಯರ್ ನರೇಂದ್ರಬಾಬು, ಹಿರಿಯ ಸಿವಿಲ್ ನ್ಯಾಯಾಧೀಶ ಸಮೀರ್ ಪಿ. ನಂದ್ಯಾಲ, ನಗರಸಭೆ ಅಧ್ಯಕ್ಷೆ ಜೈತುನ್ ಬಿ, ಪೌರಾಯುಕ್ತ ಜಗರೆಡ್ಡಿ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ವಿಜಯಕುಮಾರ್, ಆರೋಗ್ಯ ನಿರೀಕ್ಷ ಸುನಿಲ್ ಕುಮಾರ್, ಆರೋಗ್ಯ ನಿರೀಕ್ಷಕಿ ಗೀತಾ, ದಾದಾಪೀರ್ ಇದ್ದರು.