ಪಿ. ಸಿಂಘ್ವಿ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿ ವೇತನ “ಶಿಕ್ಷಾದೀಪ” ಹಮಾಲಿ ಕಾರ್ಮಿಕರ ಮಕ್ಕಳಿಗೆ “ಆಶಾದೀಪ” ಆಗಿದೆ.
ಚಳ್ಳಕೆರೆ :
ಹಮಾಲಿ ಕಾರ್ಮಿಕರ ಬಡ ಅಸಂಘಟಿತ ಕಾರ್ಮಿಕರ ಮಕ್ಕಳು ಈ ಯೋಜನೆಯ ಪ್ರಯೋಜನವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ರಾಜ್ಯ ಮುಖಾಂಡರು ಹಾಗೂ ಟಿ. ತಿಪ್ಪೇಸ್ವಾಮಿ ಹೇಳಿದರು.
ಚಳ್ಳಕೆರೆ ಎಪಿಎಂಸಿ ಶ್ರಮಿಕರ ಭಾವನದಲ್ಲಿ ನಡೆದ ಫಲಾನುಭವಿ ವಿದ್ಯಾರ್ಥಿಗಳು ಹಾಗೂ ಪಾಲಕರ ಸಭೆಯಲ್ಲಿ ಮಾತನಾಡಿದ ಅವರು “ಶಿಕ್ಷಾದೀಪ” ವಿದ್ಯಾರ್ಥಿ ವೇತನವು ಹಮಾಲಿ ಕಾರ್ಮಿಕರಂತ ಬಡ ಅಸಂಘಟಿತ ಕಾರ್ಮಿಕರ ಮಕ್ಕಳಿಗೆ “ಆಶಾದೀಪ”ವಾಗಿದೆ ಎಂದರು.
“ಶಿಕ್ಷಾದೀಪ” ಯೋಜನೆಯ ರಾಜ್ಯ ಸಂಯೋಜಕರಾದ ಈರಪ್ಪ ಅವರು ವಿದ್ಯಾರ್ಥಿಗಳು ಹಾಗೂ ಅವರ ಪಾಲಕರೊಂದಿಗೆ ಸಂವಹನ, ಶಿಕ್ಷಾದೀಪ ವಿದ್ಯಾರ್ಥಿ ವೇತನದ ಮಾಹಿತಿ, ಶಿಕ್ಷಣದ ಪ್ರಾಮುಖ್ಯತೆ, ವೃತ್ತಿ ಯೋಜನೆ ಮತ್ತು ಶಿಕ್ಷಣ ಪೂರೈಸಿದ ಮಕ್ಕಳಿಗೆ ಉದ್ಯೋಗದ ಮಾರ್ಗದರ್ಶನವನ್ನು ನೀಡಿದ ಅವರು ಹನ್ನೊಂದು ವರ್ಷಗಳಿಂದ ನಿರಂತರವಾಗಿ ಪ್ರತಿ ವರ್ಷ ರಾಜ್ಯದಾದ್ಯಂತ 45 ರಿಂದ 50 ಲಕ್ಷ ರೂಪಾಯಿಗಳನ್ನು ನೂರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತ ಬಂದಿದ್ದೇವೆ.
ಈ ವರ್ಷ ತುಮಕೂರು ಜಿಲ್ಲೆಯ 30 ಹಮಾಲಿ ಕಾರ್ಮಿಕರ ಮಕ್ಕಳಿಗೆ ಸುಮಾರು 3.50 ಲಕ್ಷಕ್ಕೂ ಹೆಚ್ಚಿನ ಮೊತ್ತದ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ ಎಂದರು.
ಇಂದಿನ ಆಧುನಿಕ ತಂತ್ರಜ್ಞಾನದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹಮಾಲಿ ಕಾರ್ಮಿಕರಂತ ಬಡ ಅಸಂಘಟಿತ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗದೇ ಉನ್ನತ ಶಿಕ್ಷಣ ಪಡೆದು ಸಮಾಜದ ಮುನ್ನೆಲೆಗೆ ಬರುವಂತೆ ಮಾಡಲು ಮಾರ್ಗದರ್ಶನ ಮತ್ತು ಸಹಾಯವನ್ನು ಮಾಡುತ್ತಿರುವ ಬೆಂಗಳೂರಿನ ಪಿ. ಸಿಂಘ್ವಿ ಚಾರಿಟೇಬಲ್ ಟ್ರಸ್ಟ್ ಅವರ “ಶಿಕ್ಷಾದೀಪ” ವಿದ್ಯಾರ್ಥಿ ವೇತನ ಯೋಜನೆಯನ್ನು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಮುಖಾಂತರ ಜಾರಿ ಮಾಡಲಾಗುತ್ತಿದೆ.
ಕಳೆದ 12 ವರ್ಷಗಳಿಂದ ನಿರಂತರವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ, ಸಂಶೋಧನಾ ಮತ್ತು ತಾಂತ್ರಿಕ ಕೋರ್ಸಗಳನ್ನು ಓದುತ್ತಿರುವ ಹಮಾಲಿ ಕಾರ್ಮಿಕರಂತ ಬಡ ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಅವರ ಶೇಕಡಾವಾರು ಫಲಿತಾಂಶದ ಆಧಾರದಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಹಾಗೂ ಅವರ ಶೈಕ್ಷಣಿಕ ಪ್ರಗತಿಗೆ ಅತ್ಯಂತ ಸಹಾಯಕಾರಿಯಾಗಿದೆ.
ವಿದ್ಯಾರ್ಥಿಗಳಾದ ದೀಪಿಕ. ಎಸ್, ಮಾನಸ, ಅರ್ಚನಾ ಅಮೃತ,ಮುಂತಾದವರು ಸಂವಾದದಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಮುಖಂಡರಾದ ಟಿ. ನಿಂಗಣ್ಣ, ಹೆಚ್. ಓ ನಾಗರಾಜ್ ದುರ್ಗಾವರ ಬೋರಯ್ಯ,ಸೇರಿದಂತೆ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.