ಚಳ್ಳಕೆರೆ :
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ತುರುವನೂರು ಹೋಬಳಿಯ ಸುಲ್ತಾನಿಪುರ ಗ್ರಾಮದ ಕೆರೆಯು ಮೈತುಂಬಿ ಹರಿಯುತ್ತಿದ್ದು ಕೋಡಿ ಬಿದ್ದಿರುವ ಪ್ರಯುಕ್ತ ಕೆರೆಗೆ ಬಾಗೀನ ಅರ್ಪಿಸಿ ಪೂಜೆ ಸಲ್ಲಿಸಿದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ತುರುವನೂರು ಹೋಬಳಿಯ ಸುಲ್ತಾನಿಪುರ ಗ್ರಾಮದ ಕೆರೆಗೆ ಬಾಗೀನ ಅರ್ಪಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮುಖಂಡರುಗಳಾದ ರವಿಕುಮಾರ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.