ಚಳ್ಳಕೆರೆ : ತಾಲ್ಲೂಕಿನ ದೊಡ್ಡಚೆಲ್ಲೂರು ಗ್ರಾಮದಲ್ಲಿ ನಡೆದ ಪ್ರಾಥಮಿಕ ಆರೋಗ್ಯ ಕೇಂದ್ರದ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಚಳ್ಳಕೆರೆ
ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಮಾತನಾಡಿದರು.
ಜಿಲ್ಲಾ ಪಂಚಾಯತ್ ಚಿತ್ರದುರ್ಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ, ಆರೋಗ್ಯ ಅಧಿಕಾರಿಗಳು ಚಳ್ಳಕೆರೆ ಇವರ ವತಿಯಿಂದ ಚಳ್ಳಕೆರೆ ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದಲ್ಲಿ ನಡೆದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಈರಣ್ಣ, ಗ್ರಾಮ ಪಂಚಾಯಿತಿ ಸದಸ್ಯರುಗಳು, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್,ಜಿಲ್ಲಾ ಗ್ಯಾರೆಂಟಿ ಸಮಿತಿಯ ಸದಸ್ಯರಾದ ಚನ್ನಕೇಶವ, ಗ್ಯಾರೆಂಟಿ ಸಮಿತಿಯ ಸದಸ್ಯರಾದ ಅನಿಲ್ ಕುಮಾರ್, ಮುಖಂಡರುಗಳಾದ ಬೋಪಣ್ಣ, ಸುರೇಶ್, ಜಯಣ್ಣ, ಪ್ರಸನ್ನಕುಮಾರ್, ನಾಗರಾಜ್, ಹೊನ್ನಪ್ಪ, ಕೃಷ್ಣಮೂರ್ತಿ, ತಿಮ್ಮಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.