ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ರಸ್ತೆಗಳ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕರ್ನಾಟಕ ಸರ್ಕಾರ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಸುಮಾರು 225.00ಲಕ್ಷ ರೂ.ಗಳ ವೆಚ್ಚದಲ್ಲಿ 2023-24 ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಿಂದ ಸಿರಿಮಜ್ಜನಪಲ್ಲಿ (ಆಂಧ್ರ ಗಡಿ) ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಹಾಗೂ ಜಾಜೂರು ಮುಖ್ಯರಸ್ತೆಯಿಂದ ಕರೇಕಲ್ ಗೊಲ್ಲರಹಟ್ಟಿ ವರೆಗೆ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾರ್ಯಕ್ರಮದ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಪರಶುರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಗಳೂರುಸ್ವಾಮಿ, ಸದಸ್ಯರುಗಳು, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರುಗಳಾದ ಚನ್ನಕೇಶವ, ಸುರೇಶ್, ಬಸವರಾಜ್, ಪ್ರಸನ್ನಕುಮಾರ್, ನಾಗರಾಜ್, ರುದ್ರೇಶ್, ನಾಗಭೂಷಣ, ಕರಿಯಣ್ಣ, ಪ್ರಕಾಶ್, ರಮೇಶ್, ಬೊಮ್ಮಕ್ಕ, ಅನಿತಾ, ಮಂಜುಳಾ, ರಂಗಸ್ವಾಮಿ, ಜಯಕುಮಾರ್, ಪ್ರಕಾಶ್,ಕೃಷ್ಣಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!