ಚಳ್ಳಕೆರೆ :

ವಿಧಾನಮಂಡಲದ ಚಳಿಗಾಲದ ಅಧಿವೇಶನ*

ಚಳ್ಳಕೆರೆ ನಗರಕ್ಕೆ ಯುಜಿಡಿ ಕಲ್ಪಿಸಲು ೨೬೦ ಕೋಟಿ ರೂ. ಅನುದಾನ ಬಿಡುಗಡೆಗೆ ಶಾಸಕ ಟಿ. ರಘುಮೂರ್ತಿ ಮನವಿ*

 ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರವು ಬೆಳೆಯುತ್ತಿರುವ ವೇಗಕ್ಕೆ ಅನುಗುಣವಾಗಿ, ನಗರಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಒಳಚರಂಡಿ ವ್ಯವಸ್ಥೆ (ಯುಜಿಡಿ) ನಿರ್ಮಾಣಕ್ಕೆ ಅಗತ್ಯವಿರುವ ೨೬೦ ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮನವಿ ಮಾಡಿದರು.


 ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಪ್ರಾರಂಭವಾದ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕ ಟಿ. ರಘುಮೂರ್ತಿ ಅವರು ಈ ಮನವಿ ಮಾಡಿದರು.


ಚಳ್ಳಕೆರೆ ಕ್ಷೇತ್ರದಲ್ಲಿ ನಾನು ಮೂರು ಬಾರಿ ಶಾಸಕನಾಗಿದ್ದೇನೆ.  ಚಳ್ಳಕೆರೆ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರಕ್ಕೆ ಉತ್ತಮ ಮೂಲಭೂತ ಸೌಲಭ್ಯ ಕಲ್ಪಿಸುವುದು ನನ್ನ ಆಶಯವಾಗಿದೆ.  ಚಳ್ಳಕೆರೆ ನಗರಕ್ಕೆ ಒಳಚರಂಡಿ ವ್ಯವಸ್ಥೆ (ಯುಜಿಡಿ) ಕಲ್ಪಿಸಲು ೨೦೧೩ ರಲ್ಲಿಯೇ ಪ್ರಸ್ತಾಪಿಸಲಾಗಿತ್ತು.  ಬಳಿಕ ೨೦೨೧ ರಲ್ಲಿ ಈ ಯೋಜನೆಗೆ ೧೯೭ ಕೋಟಿ ರೂ. ಗಳ ಅಂದಾಜು ಮಾಡಲಾಗಿತ್ತು.  ಇದೀಗ ಯೋಜನೆಯ ವೆಚ್ಚ ೨೫೩ ಕೋಟಿ ರೂ. ಆಗಿದೆ.  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಪ್ರಸ್ತುತ ಯೋಜನೆಯ ಜಾರಿಗೆ  ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ, ಈಗ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದೇನೆ ಎಂದರು.  

ಇದಕ್ಕೆ ಉತ್ತರ ನೀಡಿದ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಭೈರತಿ ಸುರೇಶ್ ಅವರು, ೨೦೧೫ ರಲ್ಲಿ ಈ ಯೋಜನೆ ೧೦೦ ಕೋಟಿ ರೂ. ಗಳ ವೆಚ್ಚದಲ್ಲಿ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಸುಮಾರು ೨೬೦ ಕೋಟಿ ರೂ. ಗಳ ವೆಚ್ಚದ ಅಂದಾಜು ಮಾಡಲಾಗಿದೆ. ಹೀಗಾಗಿ ಹಣಕಾಸು ಇಲಾಖೆಯ ಸಲಹೆ ಪಡೆದು, ಹಣಕಾಸಿನ ಲಭ್ಯತೆ ನೋಡಿಕೊಂಡು, ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಟಿ. ರಘುಮೂರ್ತಿ ಅವರು ಮುಖ್ಯಮಂತ್ರಿಗಳೇ ಯೋಜನೆಯ ಜಾರಿಗೆ ಆಸಕ್ತಿ ತೋರಿದ್ದು, ಮುಖ್ಯಮಂತ್ರಿಗಳು ಈ ಯೋಜನೆ ಸಾಕಾರಗೊಳಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

About The Author

Namma Challakere Local News
error: Content is protected !!