ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಅವರು ಚಳ್ಳಕೆರೆ ತಾಲೂಕು ಪರಶುರಾಂಪುರ ಹೋಬಳಿಯ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.
ಮೇ 24 ರಂದು ಶಾಸಕರ ಕಾರು ಸಣ್ಣ ಅಪಘಾತಕ್ಕೀಡಾಗಿ ರಘುಮೂರ್ತಿ ಅವರು ಅಪಾಯದಿಂದ ಪಾರಾಗಿ ಬಂದಿದ್ದರು. ಈ ಹಿನ್ನೆಲೆಯಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಲು ಹಾಗೂ ಶಾಸಕರ ಕ್ಷೇಮಕ್ಕಾಗಿ ಪ್ರಾರ್ಥಿಸುವ ನಿಟ್ಟಿನಲ್ಲಿ ಚಳ್ಳಕೆರೆಯ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಗ್ರಾಮಸ್ಥರು ವಿಶೇಷ ಪೂಜೆ ಹಮ್ಮಿಕೊಂಡಿದ್ದರು.
ಪೂಜೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಶಾಸಕರು, ಅಪಘಾತದ ವಿಷಯ ತಿಳಿದು ಆ ಕಷ್ಟದ ಸಂದರ್ಭದಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು.
ಈಗ ನನ್ನ ಕ್ಷೇಮಕ್ಕಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದಾರೆ. ನಿಮ್ಮ ಪ್ರೀತಿ, ಹಾರೈಕೆ, ಕಾಳಜಿ ಕಂಡು ಹೃದಯ ತುಂಬಿ ಬಂದಿದೆ. ನಿಮ್ಮೆಲ್ಲರಿಗೂ ಕೃತಜ್ಞತೆಗಳು ಹಾಗೂ ಸದಾ ಋಣಿಯಾಗಿರುವೆ ಎಂದಿದ್ದಾರೆ.