ಚಳ್ಳಕೆರೆ : ವಿಧಾನ ಪರಿಷತ್‍ಗೆ ನಡೆದ ಚುನಾವಣೆಗೆ ಜೆಡಿಎಸ್ ಮುಖಂಡ ವಾಣಿಜ್ಯೋದ್ಯಮಿ ಕೆ.ಸಿ.ವೀರೇಂದ್ರಪಪ್ಪಿಗೆ ಕೊನೆಗಳಿಗೆಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಚಳ್ಳಕೆರೆ ಜೆಡಿಎಸ್ ಕಾರ್ಯಕರ್ತರಲ್ಲಿ ಅಸಮದಾನ ಬುಗಿಲೆದ್ದಿದ್ದು ಮುಂಬರುವ ಚುಣಾವಣೆಯಲ್ಲಿ ಪಕ್ಷಕ್ಕೆ ಕೊಡಲಿ ಪೆಟ್ಟು ಬೀಳಲಿದೆ.
ಜೆಡಿಎಸ್ ಪಕ್ಷದ ವರಿಷ್ಠರು ಕೆ.ಸಿ.ವೀರೇದ್ರಪಪ್ಪಿಗೆ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಮಾಧ್ಯಮಗಳ ಮೂಲಕ ಘೋಷಣೆ ಮಾಡಿ ಕೊನೆಗಳಿಗೆಯಲ್ಲಿ ಅಭ್ಯರ್ಥಿಯಾಗಿ ಟಿ.ಎ ಶರವಣ ಕಣಕ್ಕಿಳಿಸಿರುವುದರಿಂದ ಜೆಡಿಎಸ್ ಪಕ್ಷ ಸಂಘಟನೆ ಮಾಡಿದ ಕಾರ್ಯಕರ್ತರಿಗೆ ವರಿಷ್ಟರ ಮೇಲೆ ನಂಬಿಕೆ ಕಳೆದುಕೊಂಡಂತಾಗಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡಿಕೊಂಡು ಪಕ್ಷಕ್ಕಾಗಿ ದುಡಿಯುತ್ತಿದ್ದ ಕೆ.ಸಿ.ವೀರೇಂದ್ರಪಪ್ಪಿ ಇವರಿಗೆ ವಿಧಾನಪರಿಷತ್ ಚುನಾವಣೆ ಸ್ಥಾನ ನೀಡದೆ ಇರುವುದರಿಂದ ಪಕ್ಷಕವನ್ನು ಸಂಘಟನೆ ಮಾಡುವುದು ಹೇಗೆ ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿ ಮೂಡಿದೆ.
ಮೇ.30 ಸೋಮವಾರ ರೋಟರಿ ಕ್ಲಬ್ ನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ಆಯೋಜಿಸಲಾಗಿದ್ದು ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಯಲಿದೆ ಈ ಸಭೆಗೆ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.