ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ನೀಡಲು ಶಾಸಕ ಟಿ. ರಘುಮೂರ್ತಿ ಒತ್ತಾಯ

ಶೀಘ್ರ ಅನುದಾನ ಬಿಡುಗಡೆಗೆ ಕ್ರಮ – ಮುಖ್ಯಮಂತ್ರಿ ಭರವಸೆ

ಚಳ್ಳಕೆರೆ :
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಕ್ಷೇತ್ರದ ಹಲವಾರು ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಪ್ರಶ್ನಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅವರಿಗೆ ಇರುವ ವಿಶೇಷ ಕಾಳಜಿಯನ್ನು ತೋರಿದ್ದು ತಾಲ್ಲೂಕು ಕ್ರೀಡಾಂಗಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ಕಳೆದ ವಾರವಷ್ಟೇ ಬೆಳಗಾವಿ ಅಧಿವೇಶನದಲ್ಲಿ ನಗರದ ಯುಜಿಡಿ ಕಾಮಗಾರಿಗೆ 260 ಕೋಟಿ ರು. ಹಣ ಬಿಡುಗಡೆ ಮಾಡುವಂತೆ ಒತ್ತಾಯ ಪಡಿಸಿದ ಬೆನ್ನಹಿಂದೆಯೇ ಮತ್ತೊಮ್ಮೆ ಡಿ.17ರ ಕಲಾಪದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಗರದ ಪರಶುರಾಂಪುರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾಂ ಗಣಕ್ಕೆ ಸುಮಾರು 7.60 ಕೋಟಿ ರು. ಹಣ ಬಿಡುಗಡೆ ಮಾಡುವಂತೆ ಅಧಿವೇಶನದಲ್ಲಿ ಮನವಿ ಮಾಡಿದ್ದಾರೆ.

ನಗರದ ಪರಶುರಾಂಪುರ ರಸ್ತೆಯ ರಿ, ಸರ್ವೆ ನಂ. 62ರಲ್ಲಿ 9.36 ಎಕರೆ ಜಮೀನಲ್ಲಿ 6 ಎಕರೆ ಪ್ರದೇಶದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಸಿದ್ಧತೆ ನಡೆದಿದ್ದು, 2016-17ನೇ ಸಾಲಿನಲ್ಲಿ 50 ಲಕ್ಷ ರು. ಬಿಡುಗಡೆಯಾಗಿತ್ತು. ಕೆಆರ್‌ಡಿಎಎಲ್ ವತಿಯಿಂದ ಕಾಮಗಾರಿ ಕೈಗೊಂಡು ಸದ್ಯದ ಸ್ಥಿತಿಯಲ್ಲಿ ಕ್ರೀಡಾಂಗಣದ ಸುತ್ತ ಬೇಲಿ ಹಾಕಲಾಗಿದೆ. ಉಳಿದಂತೆ ಬಾಸ್ಕೆಟ್‌ಬಾಲ್ ಅಂಕಣ, ನೀರಿನ ಸೌಲಭ್ಯ, ಪ್ರೇಕ್ಷಕರ ಗ್ಯಾಲರಿ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಒದಗಿಸಲು7.60ಕೋಟಿರು.ಹಣಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಶಾಸಕರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಂಗಣ ಮಾಡುವ ಕುರಿತು ಈಗಾಗಲೇ 50 ಲಕ್ಷ ರು. ಹಣ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಆರ್ಥಿಕ ಸ್ಥಿತಿಗತಿ ನೋಡಿ ಶೀಘ್ರ ಹಣ ಬಿಡುಗಡೆಗೊಳಿಸುವ ಭರವಸೆ ನೀಡಿದರು.

ಮುಖ್ಯಮಂತ್ರಿಗಳಿಂದ ಉತ್ತರ ಪಡೆದ ಶಾಸಕರು, ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ಕ್ಷೇತ್ರವಾಗಿದ್ದು,ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯಡಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕಿದೆ. ಸುಮಾರು ಐದಾರು ವರ್ಷಗಳಿಂದ ಕಾಮಗಾರಿ ನಡೆಯದೆ ಕ್ರೀಡಾಪಟುಗಳಿಗೆ ತೊಂದರೆಯಾಗಿದೆ, ವಿಶೇಷವಾಗಿ ಚಳ್ಳಕೆರೆ ನಗರಕ್ಕೆ ಕ್ರೀಡಾಂಗಣದ ಅವಶ್ಯಕತೆ ಇದೆ. ಮಾನ್ಯ ಮುಖ್ಯಮಂತ್ರಿಗಳು ಕ್ರೀಡಾಂಗಣ ನಿರ್ಮಾಣಕ್ಕೆ ಹಣವನ್ನು ತಪ್ಪದೆ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು.

About The Author

Namma Challakere Local News
error: Content is protected !!