ಚಳ್ಳಕೆರೆ : ಅಧಿವೇಶನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಗೆ ಗೃಹ ಸಚಿವರಾದ ಅಮಿತ್ ಶಾ ರವರು ವ್ಯಂಗ್ಯವಾಗಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಅಗೋರವ ತೋರಿರುವುದು ಖಂಡಿಸುತ್ತೆವೆ,
ಆದ್ದರಿಂದ ಈ ಕೂಡಲೇ ತಮ್ಮ ಗೃಹ ಮಂತ್ರಿ ಸ್ಥಾನದಿಂದ ರಾಜೀನಾಮೆ ನೀಡಿ ಡಾ. ಬಿಆರ್ ಅಂಬೇಡ್ಕರ್ ಅವರಿಗೆ ಮಾಧ್ಯಮದ ಮೂಲಕ ಕ್ಷಮೆ ಕೋರಬೇಕು ಎಂದು ಚಳ್ಳಕೆರೆ ತಾಲೂಕಿನ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ಪರುಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಕಾರ್ಯಕರ್ತರು ಅಮಿತ್ ಶಾ ಅವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ಘೋಷಣೆಗಳನ್ನು ಕೂಗಿದರು.
ಇನ್ನೂ ಈ ಕೂಡಲೇ ಸಂಪುಟದಿಂದ ಅಮಿತ್ ಷಾ ಅವರನ್ನು ಕೈಬಿಡಬೇಕು ದೇಶವೇ ಮೆಚ್ಚುವಂತಹ ಸಂವಿಧಾನವನ್ನು ಬರೆದ ಕೊಟ್ಟಂತಹ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅಗೌರ ತೋರಿರುವುದರಿಂದ ಗೃಹ ಸಚಿವ ಅಮಿತ್ ಶಾ ರವರನ್ನು ಹುದ್ದೆಯಿಂದ ಕೆಳಗಿಳಿಸಿ ವಜಾ ಗೊಳಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒತ್ತಾಯಿಸಿದ್ದಾರೆ.