ಚಳ್ಳಕೆರೆ ನಗರಸಭೆಯ ಉಪಾಧ್ಯಕ್ಷರ ಹುದ್ದೆಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಸುಮಾ ಭರಮಯ್ಯ ರವರು ಚಳ್ಳಕೆರೆ ತಾಲ್ಲೂಕಿನ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಟಿ.ತಿಪ್ಪೇಸ್ವಾಮಿ ರವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಜೈತುನ್ ಬೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ನಗರಸಭೆ ಸದಸ್ಯರುಗಳು, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಪ್ರಸನ್ನಕುಮಾರ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ಬಾಯಿ, ನಾಮ ನಿರ್ದೇಶನ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.