ಚಳ್ಳಕೆರೆ : ತಾಲ್ಲೂಕಿನ ವಿವಿಧ ಇಲಾಖೆಯಲ್ಲಿ ಎಸ್ಸಿ ಎಸ್ಪಿ ಹಾಗೂ ಟಿಎಸ್ಪಿ ಯೋಜನೆಯ ಅನುದಾನ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು
ಇನ್ನೂ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ತಾಪಂ ಇಒ ಶಶಿಧರ್ , ನಿಮ್ಮ ವ್ಯಾಪ್ತಿಯಲ್ಲಿ ಸರಿಯಾದ ರೀತಿಯಲ್ಲಿ ಸರಕಾರದ ಮಾರ್ಗಸೂಚಿ ಪ್ರಕಾರ ಅನುದಾನ ಖರ್ಚು ಹಾಗಿದಿಯೆ., ಇಲ್ಲವೇ ಉಳಿದಿದೆಯೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.
ಇದೇ ಸಂಧರ್ಭದಲ್ಲಿ ಸಮಾಜಕಲ್ಯಾಣ ಇಲಾಖೆಯ ದೇವ್ಲಾನಾಯ್ಕ್, ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.