ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ದೊಡ್ಡಬೀರನಹಳ್ಳಿ ಗ್ರಾಮದಲ್ಲಿ ನಡೆದ
ಶ್ರೀ ತಾಯಿ ಮುದ್ದಮ್ಮ ದೇವಿಯ ಕಾರ್ತಿಕೋತ್ಸವ ಮತ್ತು ದೇವಸ್ಥಾನದ ಹತ್ತಿರ ಸಮುದಾಯ ಭವನದ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಚಳ್ಳಕೆರೆ ತಾಲ್ಲೂಕಿನ ದೊಡ್ಡಬೀರನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ತಾಯಿ ಮುದ್ದಮ್ಮ ದೇವಿಯ ಕಾರ್ತಿಕೋತ್ಸವ ಮತ್ತು 2024-25ನೇ ಸಾಲಿನ ಮಾನ್ಯ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಸುಮಾರು 25.00ಲಕ್ಷ ರೂ.ಗಳ ವೆಚ್ಚದಲ್ಲಿ ದೇವಸ್ಥಾನದ ಹತ್ತಿರ ಸಮುದಾಯ ಭವನದ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಿದ್ದೇಶ್, ಚರಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಟಿ.ಶಶಿಧರ, ನಗರಸಭೆ ಸದಸ್ಯರಾದ ರಮೇಶ್ ಗೌಡ, ಜಿಲ್ಲಾ ಗ್ಯಾರೆಂಟಿ ಸಮಿತಿಯ ಸದಸ್ಯರಾದ ಚನ್ನಕೇಶವ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಸದಸ್ಯರಾದ ಅನಿಲ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಈರಣ್ಣ, ಸದಸ್ಯರುಗಳಾದ ಶ್ರೀಮತಿ ಜಯಮ್ಮ, ಪ್ರಸನ್ನಕುಮಾರ್, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ಮುಖಂಡರುಗಳಾದ ಬೊಪ್ಪಣ, ಸುರೇಶ್, ಜಯಣ್ಣ, ನಾಗರಾಜ್, ಹನುಮಂತರಾಯ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.