ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ಆಶೀರ್ವಾದ ಮೊಳಕಾಲ್ಮೂರು ಕ್ಷೇತ್ರದ ಜನತೆಯ ಮೇಲೆ ಇರಲಿ ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ ವೀರಭದ್ರಪ್ಪ.
ನಾಯಕನಹಟ್ಟಿ:: ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ಆಶೀರ್ವಾದ ಮೊಳಕಾಲ್ಮುರು ಕ್ಷೇತ್ರದ ಜನತೆಗೆ ಉತ್ತಮ ಆರೋಗ್ಯ ಐಶ್ವರ್ಯ ಕೊಟ್ಟು ಆಶೀರ್ವದಿಸಲಿ ಎಂದು ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ ವೀರಭದ್ರಪ್ಪ ಹೇಳಿದ್ದಾರೆ.
ಬುಧವಾರ ಪಟ್ಟಣದ ಒಳಮಠದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ತಮ್ಮ 40ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದರು 2025 ನೂತನ ವರ್ಷ ಮೊಳಕಾಲ್ಮೂರು ಕ್ಷೇತ್ರದ ಜನತೆಗೆ ಶುಭ ಹಾರೈಸಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಆಶೀರ್ವಾದದಿಂದ ಕ್ಷೇತ್ರದ ಜನತೆಗೆ ಉತ್ತಮ ಆರೋಗ್ಯ ಶಾಂತಿ ನೆಮ್ಮದಿ ಐಶ್ವರ್ಯ ಕೊಟ್ಟು ಕಾಪಾಡಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಪಿ ಶಿವಣ್ಣ, ಜೆಡಿಎಸ್ ಮೊಳಕಾಲ್ಮೂರು ತಾಲ್ಲೂಕು ಅಧ್ಯಕ್ಷ ಡಿ.ಬಿ. ಕರಿಬಸಪ್ಪ ಚೌಳಕೆರೆ, ಕಾರ್ಯಧ್ಯಕ್ಷ ನಾಗರಾಜ್ ಹನುಮಂತನಹಳ್ಳಿ, ಕೆ.ಪಿ. ತಿಪ್ಪೇಸ್ವಾಮಿ ಮಾದಯ್ಯನಹಟ್ಟಿ, ಕಾವಲು ಬಸವೇಶ್ವರನಗರ ಬೋರಣ್ಣ, ಗುಂತಕೋಲಮ್ಮನಹಳ್ಳಿ ದಳವಾಯಿ, ಜಯಣ್ಣ, ತಿಪ್ಪೇಸ್ವಾಮಿ, ಬಂಗಾರಿ, ಸುರೇಶ್, ರಾಜ್, ಬೊಮ್ಮಯ್ಯ, ಇದ್ದರು