ನೂತನ 2025ನೇ ಹೊಸ ವರ್ಷ ವಿದ್ಯಾರ್ಥಿಗಳ ಜೀವನದಲ್ಲಿ ಆಶಾದಾಯಕ ಫಲಪ್ರದಾಯಕವಾಗಿರಲಿ ಶ್ರೀ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.
ನಾಯಕನಹಟ್ಟಿ::ಜ.1. ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತನ್ನಿ ಎಂದು ಶ್ರೀ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಂವೈಟಿ ಸ್ವಾಮಿ ಹೇಳಿದ್ದಾರೆ.
ಬುಧವಾರ ಪಟ್ಟಣದ ಶ್ರೀ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ನೂತನ 2025 ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಕೇಕ್ ಕತ್ತರಿಸಿ ಮಾತನಾಡಿದ ಅವರು ನೂತನ 2025ನೇ ಹೊಸ ವರ್ಷ ವಿದ್ಯಾರ್ಥಿಗಳ ಜೀವನದಲ್ಲಿ ಆಶಾದಾಯಕ ಫಲಪ್ರದಾಯಕವಾಗಿರಲಿ ದೇವರು ಆಯುರ್ ಆರೋಗ್ಯ ಐಶ್ವರ್ಯ ಕೊಟ್ಟು ಭಗವಂತ ಕಾಪಾಡಲಿ ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಗುಣಮಟ್ಟದ ಅಂಕಗಳನ್ನು ಪಡೆದು ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತರುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಇದೇ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ ವೀರಭದ್ರಪ್ಪ ನೂತನ ಹೊಸ ವರ್ಷದ ಶುಭಾಶಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಾದ ಬಿಜೆಪಿ ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಪಿ. ಶಿವಣ್ಣ, ಜೆಡಿಎಸ್ ಮೊಳಕಾಲ್ಮೂರು ತಾಲ್ಲೂಕು ಅಧ್ಯಕ್ಷ ಡಿ.ಬಿ ಕರಿಬಸಪ್ಪ ಚೌಳಕೆರೆ, ತಾರಕೇಶ್, ಜೆಡಿಎಸ್ ಕಾರ್ಯಧ್ಯಕ್ಷ ನಾಗರಾಜ್ ಹನುಮಂತನಹಳ್ಳಿ, ಕೆ.ಪಿ. ತಿಪ್ಪೇಸ್ವಾಮಿ ಮಾದಯ್ಯನಹಟ್ಟಿ, ಬೊಮ್ಮಣ್ಣ, ಕಾವಲು ಬಸವೇಶ್ವರನಗರ ಬೋರಣ್ಣ, ಶಾಲೆಯ ಶಿಕ್ಷಕರಾದ ಫಣೀಂದ್ರ ಕುಮಾರ್, ಈರಣ್ಣ, ವೀರೇಶ್, ಬಸವರಾಜ್, ಮಾರುತಿ ತಿಮ್ಮರಾಜ್, ರಾಜಣ್ಣ, ಸೇರಿದಂತೆ ಶಾಲೆಯ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು