ಚಳ್ಳಕೆರೆ : ತಾಲ್ಲೂಕಿನ ಸಿದ್ದೇಶ್ವರನದುರ್ಗ ಗ್ರಾಮದಲ್ಲಿ ನಡೆದ ರಸ್ತೆ ಮರು ಡಾಂಬರೀಕರಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ಪೂಜೆ ಸಲ್ಲಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಸಿ.ಆರ್.ಎಫ್. ಯೋಜನೆಯಡಿ ಸುಮಾರು 5.00ಕೋಟಿ ರೂ.ಗಳ ವೆಚ್ಚದಲ್ಲಿ ಸಿದ್ದೇಶ್ವರನದುರ್ಗ ಗ್ರಾಮದ ಕುಮಟಾ-ಕಡುಮಡಗಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಯ ಭೂಮಿ ಪೂಜೆ ಮಾಡಿ ಅಧಿಕಾರಿಗಳೊಂದಿಗೆ ಮತ್ತು ಮುಖಂಡರೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು .
ಈ ಸಂದರ್ಭದಲ್ಲಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್, ಪರಶುರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಆರ್.ರುದ್ರೇಶ್, ಸಿದ್ದೇಶ್ವರದುರ್ಗ ಗ್ರಾಮ ಪಂಚಾಯಿತಿ ಸದಸ್ಯರುಗಳು, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ಜಿಲ್ಲಾ ಗ್ಯಾರೆಂಟಿ ಸಮಿತಿಯ ಸದಸ್ಯರಾದ ಚನ್ನಕೇಶವ, ಮುಖಂಡರುಗಳಾದ ಹನುಮಂತರಾಯ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.