ಚಳ್ಳಕೆರೆ : ತಾಲ್ಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಗ್ರಾಮದಲ್ಲಿ ನಡೆದ ಶ್ರೀ ಸಂತ ಸೇವಾಲಾಲ್ ದೇವಸ್ಥಾನ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಸನ್ಮಾನ್ಯ ಮುಖ್ಯಮಂತ್ರಿ ಗಳ ವಿಶೇಷ ಅನುದಾನದಡಿ ಸುಮಾರು 10.00 ಲಕ್ಷ ರೂಗಳ ವೆಚ್ಚದಲ್ಲಿ ಚಳ್ಳಕೆರೆ ತಾಲ್ಲೂಕಿನ ಕುರುಡಿಹಳ್ಳಿ ಲಂಬಾಣಿ ಹಟ್ಟಿ ಗ್ರಾಮದಲ್ಲಿ ನಡೆದ ಶ್ರೀ ಸಂತ ಸೇವಾಲಾಲ್ ದೇವಸ್ಥಾನದ ಕಾಮಗಾರಿಯ ಭೂಮಿ ಪೂಜೆ ಮಾಡಿ ಅಧಿಕಾರಿಗಳೊಂದಿಗೆ ಮತ್ತು ಮುಖಂಡರೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು .
ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಿದ್ದೇಶ್, ರಾಮಜೋಗಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ತಿಪ್ಪಕ್ಕ ಪಾಪಣ್ಣ, ಉಪಾಧ್ಯಕ್ಷರು ಬೇಬಿ ಬಾಯಿ ವೀರಭದ್ರ, ಸದಸ್ಯರು ರಾಮಸ್ವಾಮಿ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಸದಸ್ಯರಾದ ಪುರುಷೋತ್ತಮ್, ಮುಖಂಡರುಗಳಾದ ರಾಜೇಶ್, ಕಾಂತನಾಯ್ಕ್, ತಿಮ್ಮಣ್ಣ, ರಣಗನಾಯ್ಕ್, ಶಿವಣ್ಣ ನಾಯ್ಕ್, ಹನಮಿನಾಯ್ಕ್, ಒಬ್ಯಾನಾಯ್ಕ್ , ಹೇಮಂತಕುಮಾರ್, ತಿಪ್ಪೇಸ್ವಾಮಿ, ನಿರಂಜನ್, ಹರೀಶ್ , ಕುಮಾರ ನಾಯ್ಕ್, ದೇವ್ಲಾ ನಾಯ್ಕ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.