ಚಳ್ಳಕೆರೆ :
ವೈಕುಂಠ ಏಕಾದಶಿ ಸನಾತನ ಧರ್ಮಾನುಯಾಯಿಗಳು ಶ್ರದ್ಧಾ ಭಕ್ತಿಗಳಿಂದ ವಿಷ್ಣುವನ್ನು ಪೂಜಿಸುವ ಮಹತ್ವದ ದಿನವಾಗಿದೆ ಎಂದು ಅರ್ಚಕ ಪ್ರದೀಪ ಶರ್ಮ ಹೇಳಿದರು.
ಗಾಂಧಿನಗರದ ಶ್ರೀ ತಿಮ್ಮಪ್ಪ ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು,
ಏಕಾದಶಿ ಅಂದರೆ ಹನ್ನೊಂದು ಎಂಬ ಅರ್ಥವಿದೆ. ಒಂದು ತಿಂಗಳಲ್ಲಿ 2 ಏಕಾದಶಿಗಳಿರುತ್ತವೆ. ಈ ದಿನದಂದು ಉಪವಾಸವಿದ್ದು, ವ್ರತಾಚರಣೆ ಮಾಡುವ ಸಂಪ್ರದಾಯವಿದೆ. ಇನ್ನೂ ಕೆಲವರು ಏಕಾದಶಿಯ ದಿನದಂದು ಮೌನ ವ್ರತಾಚರಣೆ ಮಾಡುತ್ತಾರೆ
ನಂದಗೋಪ ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದ ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಝಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ. ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು. ಎಂದು ಅರ್ಥವಿದೆ ಎಂದರು.