ಚಿಕ್ಕಕೆರೆಯ ಕೋಡಿ ಅಭಿವೃದ್ಧಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ: ಟಿ ಬಸಪ್ಪ ನಾಯಕ.

ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ ರವರು ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತಿದ್ದಾರೆ ಎಂದು ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಟಿ ಬಸಪ್ಪ ನಾಯಕ ಹೇಳಿದರು.

ಶನಿವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕಟ್ಟಿಸಿದ ಚಿಕ್ಕಕೆರೆಯ ಕೋಡಿಯ ಅಭಿವೃದ್ಧಿ ಕಾಮಗಾರ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣರವರು ಮತದಾರರ ಋಣ ತೀರಿಸಲು ಉತ್ತಮ ಅಭಿವೃದ್ಧಿ ಕೆಲಸವನ್ನ ಮಾಡುತ್ತಿದ್ದಾರೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕಟ್ಟಿಸಿದ ಚಿಕ್ಕಕೆರೆಯ ಕೋಡಿಯ ಅಭಿವೃದ್ಧಿ ಕಾಮಗಾರಿಗೆ ಅನುದಾನವನ್ನು ನೀಡಿ, ಕಾಮಗಾರಿಗೆ ಚಾಲನೆ ನೀಡಿದ್ದರು. ಚಿಕ್ಕ ಕೆರೆಯ ಕೋಡಿ ನೀರು ಊರ ಒಳಗೆ ಹೋಗುತ್ತಿತ್ತು. ಇದನ್ನು ತಿಳಿದ ಶಾಸಕರು ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ತಿಳಿದು ಶಾಶ್ವತ ಕಾಮಗಾರಿಗೆ ಚಾಲನೆ ನೀಡಿದರು. ಮಾರ್ಚ್ ತಿಂಗಳಲ್ಲಿ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರೆ ಇರುವುದರಿಂದ, ಜಾತ್ರೆ ಒಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಕ್ಷೇತ್ರ ಶಾಸಕರು ಆದೇಶಿಸಿದ್ದಾರೆ. ಕೋಡಿ ನೀರು ಹರಿಯಲು ಕಾಲುವೆ ನಿರ್ಮಿಸಿ ಅದರ ಮೇಲೆ ವಾಹನಗಳು ಹೋಗುವಂತೆ ಪ್ರಸ್ತುತ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಪಟ್ಟಣದ ಮಸೀದಿಯಿಂದ ಪೊಲೀಸ್ ಠಾಣೆವರೆಗೆ ಒಳಚರಂಡಿ ವ್ಯವಸ್ಥೆಯನ್ನು ಸಹ ಪೂರ್ಣಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನವನ್ನು ನೀಡಿ ನಾಯಕನಹಟ್ಟಿ ಪಟ್ಟಣವನ್ನು ಅಭಿವೃದ್ಧಿ ಪಥದತ್ತ ಕೊಂಡೆಯಲೆಂದು ಹಾರೈಸಿದರು.

ವೇಳೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಜಿ ರಮೇಶ್ ಮಾತನಾಡಿದ ಅವರು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್ ವೈ ಗೋಪಾಲಕೃಷ್ಣರವರ ಆದೇಶದ ಮೇರೆಗೆ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಾರ್ಷಿಕ ಜಾತ್ರೆಯ ಒಳಗಾಗಿ ಚಿಕ್ಕಕೆರೆ ಕೋಡಿ ಅಭಿವೃದ್ಧಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗುಂತಕೋಲಮ್ಮನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಕೆ. ಟಿ. ಮಲ್ಲಿಕಾರ್ಜುನ್, ಗುತ್ತಿಗೆದಾರ ದೇವರಾಜ್, ತಿಪ್ಪೇಸ್ವಾಮಿ, ವಿವಿಧ ಹಳ್ಳಿಗಳ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!