ಚಳ್ಳಕೆರೆ :
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಪಿ.ಮಹದೇವಪುರ ಗ್ರಾಮದಲ್ಲಿ ನಡೆದ ಶ್ರೀ ಊರು ಮಾರಮ್ಮ ದೇವಿ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಪರಶುರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುದ್ರೇಶ್, ಜಿಲ್ಲಾ ಗ್ಯಾರೆಂಟಿ ಸಮಿತಿಯ ಸದಸ್ಯರಾದ ಚನ್ನಕೇಶವ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರುಗಳಾದ ತ್ಯಾಗರಾಜ, ಮಹಾಲಿಂಗ ಗೌಡ, ಮಧುಕುಮಾರ್, ಜಯಕುಮಾರ್, ಜಗಳೂರು ಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

