“ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರದ ಬೀಜ ಬಿತ್ತಬೇಕಿದೆ”:-ಮುಖ್ಯ ಶಿಕ್ಷಕ ವೆಂಕಟೇಶ್ ಅಭಿಪ್ರಾಯ. ಚಳ್ಳಕೆರೆ:-ಇಂದಿನ ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರದ ಬೀಜ ಬಿತ್ತಬೇಕಿದೆ ಎಂದು ಕಾಟವ್ವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಅಭಿಪ್ರಾಯಪಟ್ಟರು.ತಾಲ್ಲೂಕಿನ ನೇರಲಗುಂಟೆ ಸಮೀಪದ ಕಾಟವ್ವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಳ್ಳಕೆರೆಯ ಶ್ರೀಶಾರದಾಶ್ರಮದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿಯ ಕೊರತೆ ಎದ್ದು ಕಾಣುತ್ತಿದೆ.ಇಂತಹ ಸಂದರ್ಭದಲ್ಲಿ ಚಳ್ಳಕೆರೆಯ ಶ್ರೀಶಾರದಾಶ್ರಮವು ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕೊಡುವ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಎಂದು ಪ್ರಶಂಸಿಸಿದರು. ಶ್ರೀಶಾರದಾಶ್ರಮದ ಸದ್ಭಕ್ತರಾದ ಲತಾ ಗೋವಿಂದರಾಜು ಅವರು ಮಕ್ಕಳಿಗೆ ರಾಮಾಯಣದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಶ್ರೀಶಾರದಾಶ್ರಮದ ಸ್ವಯಂಸೇವಕ ಯತೀಶ್ ಎಂ ಸಿದ್ದಾಪುರ ಮಕ್ಕಳಿಗೆ ಧ್ಯಾನ ಮತ್ತು ಭಜನೆಗಳನ್ನು ಹೇಳಿಕೊಟ್ಟರು.ಈ ಕಾರ್ಯಕ್ರಮದಲ್ಲಿ ಶಾಲೆಯ ಸಹಶಿಕ್ಷಕರಾದ ಸಿ.ಎಸ್ ಭಾರತಿ,ಶಶಿಕಲಾ, ಸುನೀತರಾಣಿ, ಅಡಿಗೆ ಸಿಬ್ಬಂದಿ ಬೋರಮ್ಮ ಪಾಪಮ್ಮ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!