“ಯುವಜನಾಂಗ ಆಧ್ಯಾತ್ಮಿಕ ಸಂಸ್ಥೆಗಳ ಸಂಪರ್ಕ ಇಟ್ಟುಕೊಳ್ಳುವುದು ಒಳ್ಳೆಯದು”:- ಡಾ ಭೂಮಿಕ. ಚಳ್ಳಕೆರೆ:-ಇಂದಿನ ಯುವಜನಾಂಗ ಆಧ್ಯಾತ್ಮಿಕ ಸಂಸ್ಥೆಗಳ ಒಡನಾಟವನ್ನು ಇಟ್ಟುಕೊಳ್ಳುವುದು ಒಳ್ಳೆಯದು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕರಾದ ಡಾ ಭೂಮಿಕ ಹೇಳಿದರು.ನಗರದ ಬೆಂಗಳೂರು ರಸ್ತೆಯ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ “ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿ ದೆಸೆಯಿಂದಲೇ ಸಂಸ್ಕಾರ-ಶಾಂತಿ- ನೆಮ್ಮದಿ ನೀಡುವ ಚಳ್ಳಕೆರೆಯ ಶ್ರೀಶಾರದಾಶ್ರಮದಂತಹ ಆಧ್ಯಾತ್ಮಿಕ ಸಂಸ್ಥೆ-ಆಶ್ರಮಗಳ ಸಂಪರ್ಕ ಇಟ್ಟುಕೊಳ್ಳುವುದರಿಂದ ನಾವು ಸಮರ್ಥ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಪ್ರಜೆಗಳಾಗಿ ಸದೃಢ-ಸಮರ್ಥ ರಾಷ್ಟ್ರವನ್ನು ನಿರ್ಮಾಣ ಮಾಡಬಹುದು ಎಂದು ತಿಳಿಸಿದರು.ಈ ಉಪನ್ಯಾಸ ಕಾರ್ಯಕ್ರಮಕ್ಕೆ ಮೊದಲು ಶ್ರೀಶಾರದಾಶ್ರಮದ ಸ್ವಯಂಸೇವಕ ಯತೀಶ್ ಎಂ ಸಿದ್ದಾಪುರ ವಿದ್ಯಾರ್ಥಿಗಳಿಗೆ ಭಜನೆಗಳನ್ನು ಹೇಳಿಕೊಟ್ಟರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಾವು ಶ್ರೀಶಾರದಾಶ್ರಮದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮಗಾದ ಅನುಭವಗಳನ್ನು ಹಂಚಿಕೊಂಡರು.ಈ ಯುವ ತರಗತಿ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸ್ವಯಂಸೇವಕರಾದ ಪಿ.ಆರ್ ದೀಪ ರಾಘವೇಂದ್ರ, ಸಂತೋಷಕುಮಾರ್ ಅಗಸ್ತ್ಯ,ಸುಕೃತಿ, ಪುಷ್ಪ, ಋತ್ವಿಕ್,ಬಿ.ಆರ್ ಮನೀಷ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

About The Author

Namma Challakere Local News
error: Content is protected !!