ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ನಡೆದ ಶ್ರೀ ಸರ್ವಜ್ಞ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಸದಸ್ಯರಾದ ರಮೇಶ್ ಗೌಡ, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಕುಮಾರ್, ರಮೇಶ್, ಹಿರಿಯ ಮುಖಂಡರಾದ ತಿಪ್ಪೇಸ್ವಾಮಿ, ಮುಖಂಡರಾದ ನಾಗರಾಜ್, ರಾಜು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

