ಚಳ್ಳಕೆರೆ :
ಚಳ್ಳಕೆರೆ ನಗರದ ತಾಳಪಲ್ಲಿ ಕಾಂಪ್ಲೆಕ್ಸ್ ನಲ್ಲಿ ನಡೆದ ನೂತನ ಹಾಲು ಉತ್ಪಾದಕರ ಸಂಘದ ಉಪ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಮಾತನಾಡಿದರು.
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಡಿಯಲ್ಲಿ ಚಳ್ಳಕೆರೆ, ಮೊಳಕಾಲ್ಮೂರು ಮತ್ತು ಹಿರಿಯೂರು ತಾಲ್ಲೂಕು ವ್ಯಾಪ್ತಿಯ ಉಪ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಗೋ ಪೂಜೆ ಸಲ್ಲಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಹೆಚ್.ಎನ್. ವಿದ್ಯಾಧರ, ನಿರ್ದೇಶಕರುಗಳಾದ ಬಿ.ಸಿ. ಸಂಜೀವ ಮೂರ್ತಿ, ಜಿ.ಪಿ. ರೇವಣಸಿದ್ದಪ್ಪ, ಬಿ.ಆರ್. ರವಿಕುಮಾರ್, ಜಿಪಿ ಶೇಖರಪ್ಪ, ಶಿಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಎಸ್ ಜಿ ಶೇಖರ್, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ ಡಾ. ಟಿ.ಎಸ್. ರೇವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಉಪ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.