ಚಳ್ಳಕೆರೆ : ನಗರದ ಹೆಚ್‌ಪಿಪಿಸಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಾಚೇನೇಹಳ್ಳಿ ಇವರ ವತಿಯಿಂದ ನಡೆದ ನೂತನ ಹಾಲು ಮತ್ತು ಹಾಲಿನ ಉತ್ಪನಗಳ ಮಾರಾಟ ಮಳಿಗೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಪೂಜೆ ನೆರವೇರಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕರಾದ ಬಿಸಿ.ಸಂಜೀವ ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಹೆಚ್‍ಪಿಪಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಮಂಜುನಾಥ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.