ಚಳ್ಳಕೆರೆ :
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ 16.77 ಕೋಟಿ ಲಾಭಾಂಶ + 76.64 ಕೋಟಿ ವಿಶೇಷ ಲಾಭಾಂಶ ಒಟ್ಟು 93.41 ಕೋಟಿ ರೂ.ಗಳ ಮೊತ್ತದ ಚೆಕ್ ನ್ನು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಸಚಿವರಾದ ಶರಣಬಸಪ್ಪ ದರ್ಶನಾಪುರ ರವರೊಂದಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಬೆಂಗಳೂರು ನಗರದ ಕಾವೇರಿ ನಿವಾಸದಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಮುಖಾಂತರ ಸರ್ಕಾರಕ್ಕೆ ಹಸ್ತಾಂತರಿಸಿದರು.
ಬೆಂಗಳೂರು ನಗರದ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಳಿತಾಯದ ಲಾಭಾಂಶ ಹಣದ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

