ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ನಡೆದ ಪಂಪು ಮೋಟಾರ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿತರಣೆ ಮಾಡಿದರು.
ಸಣ್ಣ ನೀರಾವರಿ ಇಲಾಖೆ ವತಿಯಿಂದ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕೊಳವೆ ಬಾವಿಗೆ ಬೇಕಾಗುವ ಪಂಪು ಮೋಟಾರ್ ಮತ್ತು ಇನ್ನಿತರೆ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಾದ ಅಣ್ಣಪ್ಪ, ರವಿಕುಮಾರ್, ನಗರಸಭೆ ಉಪಾಧ್ಯಕ್ಷರಾದ ಸುಮಾ ಭರಮಯ್ಯ, ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ, ವೀರಭದ್ರ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಪ್ರಸನ್ನಕುಮಾರ್, ಮುಖಂಡರುಗಳಾದ ಪ್ರಹ್ಲಾದ್, ಬೋರಣ್ಣ, ರುದ್ರಮುನಿ, ನಾಗೇಶ್, ಕೋಣಪ್ಪ, ಹನುಮಂತರಾಯ, ಆನಂದ ಕುಮಾರ್, ಮಂಜುನಾಥ್, ನಾಗರಾಜ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.

