ಚಳ್ಳಕೆರೆ :

“ಶ್ರೀರಾಮಕೃಷ್ಣರು ಸತ್ಯವಾಕ್ಯ ಪರಿಪಾಲನೆಗೆ ಹೆಚ್ಚಿನ ಆದ್ಯತೆ ನೀಡಿದ್ದರು”:-ಶ್ರೀಮತಿ ಯಶೋಧಾ ಪ್ರಕಾಶ್ ಅಭಿಮತ.

ಚಳ್ಳಕೆರೆ:-ಭಗವಾನ್ ಶ್ರೀರಾಮಕೃಷ್ಣರು ತಮ್ಮ ಜೀವಿತಾವಧಿಯಲ್ಲಿ ಸತ್ಯವಾಕ್ಯ ಪರಿಪಾಲನೆಗೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂದು ನಗರದ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಯಶೋಧಾ ಪ್ರಕಾಶ್ ಅಭಿಪ್ರಾಯಪಟ್ಟರು.

ಶಿವನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಭಗವಾನ್ ಶ್ರೀರಾಮಕೃಷ್ಣ ಪರಮಹಂಸರ 190ನೇ ಜಯಂತ್ಯುತ್ಸವ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಶ್ರೀರಾಮಕೃಷ್ಣರ ಜೀವನ ಮತ್ತು ಸಂದೇಶಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಈ ಜಯಂತ್ಯುತ್ಸವದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀದೇವಿಸ್ತುತಿ ಪಠಣ,108 ಶ್ರೀರಾಮಕೃಷ್ಣರ ನಾಮಸ್ಮರಣೆ,ವಿಶೇಷ ಭಜನೆ ಹಾಗೂ ಆರತಿ ಕಾರ್ಯಕ್ರಮ ನಡೆಸಲಾಯಿತು.

ಈ ಸತ್ಸಂಗ ಸಭೆಯಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಉಷಾ ಶ್ರೀನಿವಾಸ್, ವಿಜಯಲಕ್ಷ್ಮಿ, ವನಜಾಕ್ಷಿ ಮೋಹನ್,ಮಾಣಿಕ್ಯ ಸತ್ಯನಾರಾಯಣ, ಕೆ. ಎಸ್ ವೀಣಾ , ಗೀತಾ ನಾಗರಾಜ್,ಯತೀಶ್ ಎಂ ಸಿದ್ದಾಪುರ, ರಶ್ಮಿ ರಮೇಶ್, ಶೈಲಜ, ಕೃಷ್ಣವೇಣಿ, ನಾಗರತ್ನಮ್ಮ, ಶಾರದಾಮ್ಮ, ಜಯಶೀಲಮ್ಮ, ತ್ರಿವೇಣಿ ,ನಯನ, ಮೀನಾಕ್ಷಿ ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!